ಸಿನಿಮಾ ಸುದ್ದಿಇದು ಬರಿ ಬೆಳಕಲ್ಲ, ದರ್ಶನ: ‘ಕಾಂತಾರ’ ಪ್ರೀಕ್ವೆಲ್ ಫಸ್ಟ್ ಲುಕ್ ರಿಲೀಸ್ ಬಗ್ಗೆ ರಿಷಬ್ ಶೆಟ್ಟಿ ಮಾಹಿತಿ!
ಟ್ವಿಟ್ಟರ್ ನಲ್ಲಿ ಈ ವಿಷಯವನ್ನು ಹಂಚಿಕೊಂಡಿರುವ ಹೊಂಬಾಳೆ ಫಿಲ್ಮ್ಸ್, ‘ಪ್ರತಿ ಕ್ಷಣವೂ ದೈವಿಕ ಸ್ಪರ್ಶವನ್ನು ಅನುಭವಿಸುವುದರ ಜತೆ ಇತಿಹಾಸದ ನಿಗೂಢ ಸತ್ಯವನ್ನು ಅನ್ವೇಷಿಸಿ. ಹಿಂದೆಂದಿಗೂ ನೋಡಿರದ ವಿಸ್ಮಯವನ್ನು ಕಣ್ತುಂಬಿಕೊಳ್ಳಲು ಕಾತುರರಾಗಿ. ಇದು ಬರಿ ಬೆಳಕಲ್ಲ, ದರ್ಶನ’ ಎಂದು ಹೇಳಿದೆ.