ದೇಶಸೇನಾಪಡೆಗಳ ಮೇಲೆ ಗ್ರೆನೇಡ್ ಎಸೆದ ಉಗ್ರರು: ಗುರಿ ತಪ್ಪಿ ರಸ್ತೆಯಲ್ಲೇ ಸ್ಫೋಟ, 6 ನಾಗರೀಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭಾರತೀಯ ಸೇನಾಪಡೆಯ ವಾಹನದ ಮೇಲೆ ಉಗ್ರರು ಎಸೆದ ಗ್ರೆನೇಡ್ ಒಂದು ಗುರಿತಪ್ಪಿ ರಸ್ತೆಯಲ್ಲಿಯೇ ಸ್ಫೋಟಗೊಂಡಿದ್ದು, ಪರಿಣಾಮ ಸ್ಥಳದಲ್ಲಿದ್ದ 6 ಮಂದಿ ನಾಗರೀಕರು ಗಾಯಗೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ.