ನಾಡಗೀತೆ

ನಾಡಗೀತೆ: ಹೈಕೋರ್ಟ್ ಆದೇಶದಲ್ಲಿ ಮಧ್ಯ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನಕಾರ!
ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಆರ್. ಮಹಾದೇವನ್ ಅವರಿದ್ದ ಪೀಠವು ವಜಾಗೊಳಿಸಿತು.

ನಾಡಗೀತೆಗೆ ಬೌದ್ಧ ಪದ ಸೇರ್ಪಡೆಗೆ ಶಿಫಾರಸು: 'ಪಾರಸಿಕ ಜೈನರುದ್ಯಾನ' ಬದಲಿಗೆ 'ಬೌದ್ಧರುದ್ಯಾನ'?
ನಾಡಗೀತೆಯಲ್ಲಿ ಇರುವ ‘ಪಾರಸಿಕ ಜೈನರುದ್ಯಾನ’ ಎಂಬ ಸಾಲನ್ನು ಪರಿಷ್ಕರಿಸಿ ‘ಬೌದ್ಧ’ ಪದವನ್ನೂ ಒಳಗೊಂಡಂತೆ ‘ಪಾರಸಿಕ ಜೈನ ಬೌದ್ಧರುದ್ಯಾನ’ ಎಂದು ಮಾರ್ಪಾಡು ಮಾಡಲು ಸಮಿತಿಯು ರಾಜ್ಯ ಸರ್ಕಾರಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದೆ

ಮೈಸೂರು ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.

ನಾಡಗೀತೆಗೆ ಆಕ್ಷೇಪ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್
ವಿಧಾನಸಭೆಯಲ್ಲಿ ವಿಸ್ತೃತ ಚರ್ಚೆಯ ಬಳಿಕ ಶಿಕ್ಷಣ ಕಾಯಿದೆ ಅಡಿ ನೋಂದಾಯಿತ ಶಾಲೆಗಳೆಲ್ಲವೂ ಖ್ಯಾತ ಗಾಯಕ, ಸಂಗೀತ ಸಂಯೋಜಕ ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರವು ಹೈಕೋರ್ಟ್‌ಗೆ ತಿಳಿಸಿದೆ. ಇದನ್ನು ಆಲಿಸಿದ ನ್ಯಾಯಾಲಯವು ಆದೇಶ ಕಾಯ್ದಿರಿಸಿದೆ.

ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ಸುತ್ತೋಲೆ: ಸಚಿವ ಶಿವರಾಜ ತಂಗಡಗಿ ಸ್ಪಷ್ಟನೆ
ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ ಹೇರಿ ನಂತರ ವಿವಾದ ಕೇಳಿಬಂದ ಹಿನ್ನೆಲೆಯಲ್ಲಿ ಸುತ್ತೋಲೆ ಹಿಂಪಡೆದಿದ್ದ ಮತ್ತು ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಕವಿತೆಯ ಬರಹದ ಸಾಲುಗಳನ್ನು ತೆಗೆಸಿ ಆಮೇಲೆ ಯೂಟರ್ನ್ ತೆಗೆದುಕೊಂಡಿದ್ದ ರಾಜ್ಯ ಸರ್ಕಾರ ಇದೀಗ ಮತ್ತೊಂದು ಅಂಥದ್ದೇ ಕ್ರಮಕ್ಕೆ ಮುಂದಾಗಿ ವಿವಾದ ಮೈಮೇಲೆ ಎಳೆದುಕೊಂಡಿದೆ.

ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ "ಜಯಭಾರತ ಜನನಿಯ ತನುಜಾತೆ" ಹಾಡಲು ಹೊರಡಿಸಿದ ಆದೇಶದ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

'ತಮಿಳ್ ತಾಯ್ ವಾಳ್ತು' ನಾಡಗೀತೆಯಾಗಿ ಘೋಷಿಸಿದ ತಮಿಳುನಾಡು ಸರ್ಕಾರ
ತಮಿಳುನಾಡು ಸರ್ಕಾರ ತಮಿಳು ತಾಯಿಯನ್ನು ಶ್ಲಾಘಿಸುವ ಹಾಡು 'ತಮಿಳ್ ತಾಯ್ ವಾಳ್ತು' ಅನ್ನು ನಾಡಗೀತೆಯಾಗಿ ಶುಕ್ರವಾರ ಘೋಷಿಸಿದೆ ಮತ್ತು ಈ ಹಾಡು ಹಾಡುವ ವೇಳೆ ಹಾಜರಿದ್ದವರೆಲ್ಲರೂ ಎದ್ದು ನಿಂತು ಗೌರವ ಸಲ್ಲಿಸಬೇಕು...

ಚುನಾವಣಾ ನೀತಿ ಸಂಹಿತೆ ಬಳಿಕ ನಾಡಗೀತೆ ಬಗ್ಗೆ ಅಂತಿಮ ತೀರ್ಮಾನ: ಸಚಿವ ಸುನೀಲ್‌ಕುಮಾರ್
ನಾಡಗೀತೆ ಸಮಯ ಕಡಿತ ಮಾಡುವ ವಿಚಾರ ಮಾಡಬೇಕೇ ಬೇಡವೇ ಎಂಬ ಬಗ್ಗೆ ಈಗಾಗಲೇ ಸಮಿತಿ ಸರ್ಕಾರಕ್ಕೆ ತನ್ನ ವರದಿಯನ್ನು ನೀಡಿದ್ದು ಚುನಾವಣೆ ನೀತಿ ಸಂಹಿತರ ಬಳಿಕ ಈ ಬಗ್ಗೆ ಸರ್ಕಾರ ತನ್ನ ಅಂತಿಮ ನಿರ್ಧಾರ ಪ್ರಕಟಿಸುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್‌ಕುಮಾರ್ ಹೇಳಿದ್ದಾರೆ.

ಜಯ ಭಾರತ ಜನನಿಯ ತನುಜಾತೆ ನಾಡಗೀತೆಗೆ 150 ಸೆಕೆಂಡ್ ಕತ್ತರಿ!?
: ನಾಡಗೀತೆ ಜಯಭಾರತ ಜನನಿಯ ತನುಜಾತೆ ಹಾಡನ್ನು 9 ನಿಮಿಷಗಳು ಹಾಡಲಾಗುತ್ತಿದ್ದು, ಅದನ್ನು 2 ನಿಮಿಷ 30 ಸೆಕಂಡ್ ಗಳಷ್ಟು ಕಡಿತಗೊಳಿಸಲು...

