ರಾಜ್ಯ'ಜಯ ಭಾರತ ಜನನಿಯ ತನುಜಾತೆ' ರಾಗ-ಅವಧಿ ಗೊಂದಲಕ್ಕೆ ಬಿತ್ತು ತೆರೆ: ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್
ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಹಾಡಲು ನಿರ್ದಿಷ್ಟ ಧಾಟಿ ಮತ್ತು ಕಾಲಮಿತಿಯನ್ನು ನಿಗದಿಪಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಸರ್ಕಾರದ ಈ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿರುವ ನ್ಯಾಯಾಲಯವು, ಈ ಕುರಿತು ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ.