ರಾಜ್ಯವಿಧಾನ ಪರಿಷತ್ ಚುನಾವಣೆಯಲ್ಲಿ ನಾಮಾಂಕಿತ ಸದಸ್ಯರು ಮತದಾನ ಮಾಡಲು ಅರ್ಹರಲ್ಲ: ಹೈಕೋರ್ಟ್
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಆಯ್ಕೆಗೆ ನಡೆಯುವ ಚುನಾವಣೆಯಲ್ಲಿ ಜನರಿಂದ ಚುನಾಯಿತರಾದವರು ಮಾತ್ರ ಮತದಾನ ಮಾಡಲು ಅರ್ಹರಾಗಿರುತ್ತಾರೆ. ಸರ್ಕಾರದಿಂದ ನಾಮಾಂಕಿತಗೊಂಡ ಸದಸ್ಯರು ಮತ ಚಲಾಯಿಸಲು ಅರ್ಹರಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.