ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ 'ನಾಲಾಯಕ್' ಎಂದು ಕರೆದಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.