ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬನಘಟ್ಟದ ಬಳಿ ಮಂಗಳವಾರ ಸಂಜೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದಿದ್ದು, ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಐವರೂ ಜಲಸಮಾಧಿಯಾಗಿದ್ದಾರೆ.