ರಾಜ್ಯನಿಯಮಬಾಹಿರ ಕೆಲಸಗಳಲ್ಲಿ ನಿಮ್ಮ ಪಾಲೆಷ್ಟು? ಸಿದ್ದುಗೆ ಶಿಕ್ಷಣ ಸಚಿವ ನಾಗೇಶ್ ಪ್ರಶ್ನೆ
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಖಾಸಗಿ ಸಿಬಿಎಸ್ಸಿ ಶಾಲೆಗಳ ಆರಂಭಕ್ಕೆ NOC ನೀಡಲು ನಿಯಮಗಳನ್ನೇ ರೂಪಿಸದೆ, ಅನಧಿಕೃತವಾಗಿ ಹಲವು ಶಾಲೆಗಳನ್ನು ಆರಂಭಿಸಲು ಅವಕಾಶ ಮಾಡಿಕೊಟ್ಟು, ಅಕ್ರಮಕ್ಕೆ ಕುಮ್ಮಕ್ಕು ನೀಡಿರುವುದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ. ನಾಗೇಶ್ ಪ್ರಶ್ನಿಸಿದ್ದಾರೆ.