ದೇಶ'ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಗೂ ಮಾತನಾಡಲು ಬಿಡಿ, ನಿಮ್ಮಲ್ಲಿ ತಾಳ್ಮೆಯಿಲ್ಲದಿದ್ದರೆ ರೋಗಿಗಳಾಗಿಬಿಡುತ್ತೀರಿ': ನಿರ್ಗಮಿತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು
ನಿರ್ಗಮಿತ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಸರ್ಕಾರಕ್ಕೆ ಮತ್ತು ವಿರೋಧ ಪಕ್ಷಕ್ಕೆ ಒಂದು ಸಲಹೆ ನೀಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ನೀಡುವ ತೀರ್ಪುಗಳನ್ನು ಸ್ವೀಕರಿಸುವ ಸಹಿಷ್ಣುತೆ ಬೇಕು. ಸಂಸತ್ತಿನಲ್ಲಿ ಆಡಳಿತ ಪಕ್ಷದಲ್ಲಿರುವ ಸದಸ್ಯರು ವಿರೋಧ ಪಕ್ಷಗಳ ಸದಸ್ಯರು ಮಾತನಾಡಲು, ತಮ್ಮ ಅಭಿಪ್ರಾಯ ಕೊಡಲು ಅವಕಾಶ ನೀಡಬೇಕು ಎಂದಿದ್ದಾರೆ.