ನೀಟ್ ಪ್ರತಿಭಟನೆ

'ಅಸಹ್ಯಕರ', ಕೋರ್ಟ್‌ನ ಆತ್ಮಸಾಕ್ಷಿಗೆ ನೋವುಂಟಾಗಿದೆ: ಮೋದಿ ಪೋಸ್ಟರ್ ಪ್ರದರ್ಶಿಸಿದ್ದ ಬಂಗಾಳಿ ನಟಿಗೆ ಹೈಕೋರ್ಟ್ ತರಾಟೆ!
ಜುಲೈನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಪ್ರಧಾನಿ ನರೇಂದ್ರ ಮೋದಿಯವರ 'ಆಕ್ಷೇಪಾರ್ಹ' ಪೋಸ್ಟರ್ ಪ್ರದರ್ಶಿಸಿದ್ದಕ್ಕೆ ಕೋಲ್ಕತ್ತಾ ಹೈಕೋರ್ಟ್ ಅಸಹ್ಯಕರ ಎಂದು ಹೇಳಿದೆ.

NEET ಪ್ರತಿಭಟನೆ: ಪೊಲೀಸ್ ದೌರ್ಜನ್ಯ, ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸುಪ್ರೀಂಕೋರ್ಟ್!
ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್. ಸುಭಾಷ್ ರೆಡ್ಡಿ ಅವರ ನೇತೃತ್ವದಲ್ಲಿ ಐವರು ಸದಸ್ಯರನ್ನೊಳಗೊಂಡ ಉನ್ನತ ಮಟ್ಟದ ಸಮಿತಿಯೊಂದನ್ನು ಸುಪ್ರೀಂ ಕೋರ್ಟ್ ರಚಿಸಿದೆ.

12 ವರ್ಷಗಳಲ್ಲಿ ನಾವು ಸಾಧಿಸಲಾಗದ್ದನ್ನು ಒಂದೇ ವಾರದಲ್ಲೇ ಯುವಜನರು ಸಾಧಿಸಿದ್ದಾರೆ: ಹರ್ಷ್ ಮಂದರ್
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಶ್ಲಾಘಿಸಿದರು. ಧೈರ್ಯ, ಉತ್ಸಾಹ ಮತ್ತು ಬದ್ಧತೆಯಿಂದ ಸ್ವಯಂಸ್ಫೂರ್ತಿಯಾಗಿ ರೂಪುಗೊಂಡ ಈ ಚಳವಳಿ, ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಗಂಭೀರ ಬಿಕ್ಕಟ್ಟಿನ ಪ್ರಬಲ ಸಂಕೇತವಾಗಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ಪರಿವರ್ತಿಸಿದೆ

Gen Z ಗಳಿಗೆ ಗುಡ್ ನ್ಯೂಸ್; ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ಗುಜರಾತ್ ಸರ್ಕಾರ
ಪ್ರತಿಭಟನೆಗಳಲ್ಲಿ ಭಾಗವಹಿಸಿದವರ ವಿರುದ್ಧ ಈಗಾಗಲೇ ಯಾವುದೇ ಎಫ್‌ಐಆರ್‌ಗಳು ಅಥವಾ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೆ, ಅವುಗಳನ್ನು ಹಿಂತೆಗೆದುಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಸರ್ಕಾರ ಆದೇಶಿಸಿದೆ.

ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ಗಳನ್ನು ರಾಜ್ಯಗಳು ರದ್ದು ಅಥವಾ ಹಿಂಪಡೆಯಬಹುದು: ಸುಪ್ರೀಂ ಕೋರ್ಟ್
ನೀಟ್ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದು ಅಥವಾ ಹಿಂಪಡೆಯಲು ರಾಜ್ಯ ಸರ್ಕಾರಗಳು ಸ್ವತಂತ್ರವಾಗಿವೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಸ್ಪಷ್ಟಪಡಿಸಿದೆ.

ಪ್ರಧಾನ್ ರಾಜಿನಾಮೆ ಯಶಸ್ಸಿನ ಬೆನ್ನಲ್ಲೇ ಆಗಸ್ಟ್ 5ರಂದು CJP ಮಹತ್ವದ ಸಭೆ; ಭವಿಷ್ಯದ ಕಾರ್ಯತಂತ್ರದ ಕುರಿತು ಚರ್ಚೆ
ಕಾಕ್ರೋಚ್ ಜನತಾ ಪಕ್ಷದ (CJP) ಪ್ರಮುಖ ಸದಸ್ಯರು ಆಗಸ್ಟ್ 5ರಂದು ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ತಮ್ಮ ಭವಿಷ್ಯದ ಕಾರ್ಯಸೂಚಿಯನ್ನು ಚರ್ಚಿಸಲು ಸಭೆ ನಡೆಸಲಿದ್ದಾರೆ.

PM ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; Meta India ಮುಖ್ಯಸ್ಥ ಸೇರಿ ಹಲವರ ವಿರುದ್ಧ ಕೇಸು ದಾಖಲು
ಜುಲೈ 29ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಮಾಜಿಕ ಜಾಲತಾಣ ವೀಕ್ಷಿಸುತ್ತಿದ್ದಾಗ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಎಂದು ತೋರುವ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟುಮಾಡುವ ರೀತಿಯ ರೀಲ್ಸ್ ಮತ್ತು ಪೋಸ್ಟ್‌ಗಳನ್ನು ಗಮನಿಸಿದ್ದಾಗಿ ತಿಳಿಸಿದ್ದಾರೆ.

NEET ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್ ಹಿಂಪಡೆಯಲು ಮಹಾರಾಷ್ಟ್ರ ಸರ್ಕಾರ ಮುಂದು!
ಗೃಹ ಖಾತೆಯನ್ನು ಹೊಂದಿರುವ ಫಡ್ನವೀಸ್, ರಾಜ್ಯದಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳನ್ನು ಹಿಂಪಡೆಯುವಂತೆ ಇಲಾಖೆಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

NEET ಪ್ರತಿಭಟನೆ: 18 ವರ್ಷದೊಳಗಿನ ವಿದ್ಯಾರ್ಥಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ; ಸಾಕ್ಷ್ಯ ಸಂರಕ್ಷಣೆಗೆ ಸೂಚನೆ..!
ಪ್ರತಿಭಟನೆ ನಡೆದ ಎಲ್ಲಾ ರಾಜ್ಯಗಳಿಗೆ, ಸಿಸಿಟಿವಿ ದೃಶ್ಯಗಳು, ಡ್ರೋನ್ ವಿಡಿಯೊಗಳು, ಬಾಡಿ ಕ್ಯಾಮೆರಾ ದೃಶ್ಯಗಳು, ವೈರ್‌ಲೆಸ್ ಸಂವಹನ ದಾಖಲೆಗಳು, ಪಿಸಿಆರ್ ಲಾಗ್‌ಗಳು ಹಾಗೂ ಇತರೆ ಡಿಜಿಟಲ್ ಸಾಕ್ಷ್ಯಗಳನ್ನು ಯಾವುದೇ ಕಾರಣಕ್ಕೂ ನಾಶಪಡಿಸದೆ ಸುರಕ್ಷಿತವಾಗಿ ಸಂರಕ್ಷಿಸಬೇಕು.

