ದೇಶನೀಟ್- ಯುಜಿ ಪರೀಕ್ಷೆ ಮುಂದೂಡಲು ಸುಪ್ರೀಂ ನಕಾರ
ಸೆಪ್ಟೆಂಬರ್ 12 ರಂದು ನಿಗದಿಯಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್- ಯುಜಿ) ಮುಂದೂಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಈ ಪರೀಕ್ಷೆ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಲು ನ್ಯಾಯಾಲಯ ಬಯಸುವುದಿಲ್ಲ ಮತ್ತು ಅದನ್ನು ಮರು ನಿಗದಿಗೊಳಿಸುವುದು ಸಹ ನ್ಯಾಯಸಮ್ಮತವಲ್ಲ ಎಂದು ಹೇಳಿದೆ.