ರಾಜಕೀಯ"ಗೇಮ್ ಚೇಂಜರ್ಸ್" ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಕೇವಲ "ನೇಮ್ ಚೇಂಜರ್ಸ್" ಆಗಿದೆ: ಪ್ರಿಯಾಂಕ್ ಖರ್ಗೆ
ಇಂಡಿಯಾ ಹೆಸರನ್ನು ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ದೇಶಾದ್ಯಂತ ಭಾರೀ ಚರ್ಚೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿಯೂ ನಿನ್ನೆಯಿಂದ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಎದುರಿಸುತ್ತಿರುವ ಇಂಡಿಯಾ ಮೈತ್ರಿಕೂಟ ಸದಸ್ಯರು ಭಾರತ್ ಹೆಸರು ನಾಮಕರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.