ರಾಜ್ಯಬೆಂಗಳೂರು: ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಅರೆಸ್ಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊಕೇನ್ ಮಾರಾಟ ಮಾಡಿದ್ದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ನೈಜೀರಿಯಾದ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತನಿಂದ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.