ನ್ಯಾಯಮೂರ್ತಿ

ನಗದು ಪತ್ತೆ ಪ್ರಕರಣ: ನ್ಯಾ. ಯಶವಂತ್ ವರ್ಮಾ ವಿರುದ್ಧ ಮಹಾಭಿಯೋಗ ಪ್ರಕ್ರಿಯೆ ಆರಂಭ, ಮುಂದೇನು..?
ಲೋಕಸಭೆಯ 145 ಮತ್ತು ರಾಜ್ಯಸಭೆಯ 63 ಸಂಸದರು ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ಕೋರಿ ಲೋಕಸಭೆಯ ಸ್ಪೀಕರ್ ಮತ್ತು ರಾಜ್ಯಸಭೆಯ ಸಭಾಧ್ಯಕ್ಷರಿಗೆ ನೋಟಿಸ್ ನೀಡಿದ್ದಾರೆ.

ರಾಜ್ಯ ಹೈಕೋರ್ಟ್ ಐವರು ನ್ಯಾಯಮೂರ್ತಿಗಳ ಸೇವೆ ಖಾಯಂ
ರಾಜ್ಯ ಹೈಕೋರ್ಟ್ ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದ ಐವರು ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಸುಪ್ರೀಂ ಕೋರ್ಟ್ ಕೊಲಿಜಿಯಂ ಅಧಿಸೂಚನೆ ಹೊರಡಿಸಿದೆ.

ಸುಪ್ರೀಂ ಕೋರ್ಟ್ ನ್ಯಾಯಾಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಪ್ರಮಾಣ ವಚನ ಸ್ವೀಕಾರ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

'ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ಡಿಕೆಶಿ ಜೊತೆ ನ್ಯಾಯಮೂರ್ತಿಗಳು ವೇದಿಕೆ ಹಂಚಿಕೊಳ್ಳಬಹುದೇ?': ಮಾಜಿ ಸಚಿವ ಸುರೇಶ್ ಕುಮಾರ್
ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ವಕೀಲರ ರಾಜ್ಯಮಟ್ಟದ ಹತ್ತನೇ ಸಮಾವೇಶ ಆಗಸ್ಟ್ 12ರಂದು ಆಯೋಜನೆಯಾಗಿರುವ ಬೆನ್ನಿಗೇ ಕಾರ್ಯಕ್ರಮದ ವೇದಿಕೆಯಲ್ಲಿ ನ್ಯಾಯಮೂರ್ತಿಗಳೊಂದಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವೇದಿಕೆ ಹಂಚಿಕೊಳ್ಳುವ ವಿಷಯ ಶಿಷ್ಟಾಚಾರ ಹಾಗೂ ರಾಜಕಾರಣದ ಚರ್ಚೆಗೆ ಕಾರಣವಾಗಿದೆ.

ನ್ಯಾಯಾಧೀಶರ ನೇಮಕಾತಿಯಲ್ಲಿನ ವಿಳಂಬ ಅವರ ಜೇಷ್ಠತೆಗೆ ಭಂಗ ತರುತ್ತದೆ: ಸುಪ್ರೀಂ ಕೋರ್ಟ್ ಕೊಲಿಜಿಯಂ
ನ್ಯಾಯಮೂರ್ತಿಗಳ ನೇಮಕಕ್ಕೆ ಶಿಫಾರಸು ಮಾಡಲಾದ ಹೆಸರುಗಳನ್ನು ತಡೆಹಿಡಿಯುವ ಅಥವಾ ಕಡೆಗಣಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಈ ಹಿಂದೆ ಶಿಫಾರಸು ಮಾಡಿದ ಅಭ್ಯರ್ಥಿಗಳ ಜೇಷ್ಠತೆಯ ನಷ್ಟವನ್ನು ಕೊಲಿಜಿಯಂ ಗಮನಿಸಿದ್ದು, ಇದು ಗಂಭೀರ ಕಳವಳದ ವಿಷಯವಾಗಿದೆ. ಇದು ಅವರ ಜೇಷ್ಠತೆಗೆ ಭಂಗ ತರುತ್ತದೆ ಎಂದು ಬುಧವಾರ ಹೇಳಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ರಾಜೇಶ್ ಬಿಂದಾಲ್, ಅರವಿಂದ ಕುಮಾರ್ ಪ್ರಮಾಣವಚನ ಸ್ವೀಕಾರ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ರಾಜೇಶ್ ಬಿಂದಾಲ್ ಮತ್ತು ಅರವಿಂದ ಕುಮಾರ್ ಅವರು ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ದೀಪಂಕರ್ ದತ್ತಾ ಪ್ರಮಾಣವಚನ ಸ್ವೀಕಾರ
ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ದೀಪಂಕರ್ ದತ್ತಾ ಅವರು ಸೋಮವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಕರ್ನಾಟಕ ಹೈಕೋರ್ಟ್'ನ 10 ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿದ ಕೇಂದ್ರ ಸರ್ಕಾರ
ಕರ್ನಾಟಕ ಹೈಕೋರ್ಟ್‌ನ 10 ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಕೇಂದ್ರ ಸರ್ಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ.

ಓಮರ್ ಗೃಹಬಂಧನ: ವಿಚಾರಣೆಯಿಂದ ಹಿಂದಕ್ಕೆ ಸರಿದ ನ್ಯಾಯಮೂರ್ತಿ ಶಾಂತನಗೌಡರ್
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲ ಅವರನ್ನು ಸಾರ್ವಜನಿಕ ಸುರಕ್ಷಾ ಕಾಯ್ದೆಯಡಿ ಗೃಹ ಬಂಧನದಲ್ಲಿಟ್ಟಿರುವ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ಹಿಂದೆ ಸರಿದಿದ್ದಾರೆ.

