ನ್ಯಾಯಾಂಗ ತನಿಖೆ

ಸರ್ಕಾರದ ವಿರುದ್ಧ ಪೋಸ್ಟ್: ಬಿಹಾರದಲ್ಲಿ ಯುವಕನ ಎನ್ ಕೌಂಟರ್; ನ್ಯಾಯಾಂಗ ತನಿಖೆಗೆ ಸಿಎಂ ಆದೇಶ
ಪೊಲೀಸ್ ಕ್ರಮದ ಬಗ್ಗೆ ಪ್ರಶ್ನೆಗಳು ಎದ್ದಿವೆ, ಸ್ಥಳೀಯ ಮಟ್ಟದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ ಮತ್ತು ಆಡಳಿತಾರೂಢ ಬಿಜೆಪಿಯೊಳಗಿನಿಂದಲೂ ಕಳವಳದ ಧ್ವನಿಗಳು ಹೊರಹೊಮ್ಮುತ್ತಿವೆ.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ: ಪರಿಹಾರ ಹೆಚ್ಚಿಸಿ-ನ್ಯಾಯಾಂಗ ತನಿಖೆ ನಡೆಸಿ; ಸರ್ಕಾರಕ್ಕೆ ವ್ಯಾಪಾರಿಗಳ ಒತ್ತಾಯ
ಗಾಯಗೊಂಡವರು ಸಂಪೂರ್ಣ ಚೇತರಿಸಿಕೊಳ್ಳಲು ಹಲವು ತಿಂಗಳುಗಳು ಬೇಕಾಗುವ ಕಾರಣ, ಅವರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಸಂಘಟನೆ ಹೇಳಿದೆ.

ಸಿಜೆ ರಾಯ್ ಆತ್ಮಹತ್ಯೆ: ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ಒತ್ತಾಯ, ಕೇಂದ್ರಕ್ಕೆ ಪತ್ರ!
ರಾಯ್ ಅವರನ್ನು ಶೋಧದ ಸ್ಥಳದಲ್ಲಿ ಇರಿಸುವ ಬದಲು ಮತ್ತೊಂದು ಕೊಠಡಿಗೆ ಸ್ಥಳಾಂತರಿಸಲಾಗಿದೆ ಎನ್ನುವ ಇತ್ತೀಚಿನ ವರದಿಗಳನ್ನು ವಿಜಯನ್ ಉಲ್ಲೇಖಿಸಿದ್ದು, ಇದು ಗಂಭೀರವಾದ ಲೋಪ ಮತ್ತು ಅಗತ್ಯ ಶಿಷ್ಟಾಚಾರ ಅನುಸರಿಸದಿರುವುದಕ್ಕೆ ಸಾಕ್ಷಿ ಎಂದಿದ್ದಾರೆ.

ಬೆಂಗಳೂರು ಕಾಲ್ತುಳಿತ: ಗಾಯಾಳುಗಳನ್ನು ಭೇಟಿಯಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ; ನ್ಯಾಯಾಂಗ ತನಿಖೆಗೆ ಒತ್ತಾಯ
ಇದು ಆಕಸ್ಮಿಕವಾಗಿ ಆದ ದುರಂತವಲ್ಲ. ರಾಜ್ಯ ಸರ್ಕಾರ ಮತ್ತು ಅಧಿಕಾರಿಗಳ ಸಂಪೂರ್ಣ ಬೇಜವಾಬ್ದಾರಿತನದಿಂದ ಆಗಿದೆ ಎಂದು ಆರೋಪಿಸಿದರು.

ದೇವಸ್ಥಾನದಲ್ಲಿ ಕಾಲ್ತುಳಿತ: ನ್ಯಾಯಾಂಗ ತನಿಖೆಗೆ ಗೋವಾ ಸಿಎಂ ಆದೇಶ
ಪಣಜಿಯಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಶಿರ್ಗಾವೊ ಗ್ರಾಮದಲ್ಲಿರುವ ಶ್ರೀ ಲೈರೈ ದೇವಿ ದೇವಾಲಯದಲ್ಲಿ ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಕಾಲ್ತುಳಿತ ಸಂಭವಿಸಿದೆ.

ಕುಂಭ ಮೇಳದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ; ನ್ಯಾಯಾಂಗ ತನಿಖೆಗೆ ಆದೇಶ
ಪ್ರಯಾಗ್‌ರಾಜ್‌ನಲ್ಲಿ 36 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಖಾರ ಮಾರ್ಗದ ಬ್ಯಾರಿಕೇಡ್‌ಗಳನ್ನು ಜನಸಮೂಹ ಮುರಿದಾಗ ಕಾಲ್ತುಳಿತ ಸಂಭವಿಸಿದೆ.

ಬಾಣಂತಿಯರ ಸಾವು: ನ್ಯಾಯಾಂಗ ತನಿಖೆ, ದಿನೇಶ್ ಗುಂಡೂರಾವ್ ರಾಜೀನಾಮೆಗೆ ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯ
ರಾಜ್ಯದಲ್ಲಿ ಬಾಣಂತಿಯರ ಮರಣ ಮೃದಂಗ ಇನ್ನೂ ನಿಂತಿಲ್ಲ. ಒಟ್ಟು 736 ತಾಯಂದಿರು ಮೃತಪಟ್ಟಿದ್ದಾರೆ. ಇದು ಸರ್ಕಾರದ ಪ್ರಾಯೋಜಿತ ಕೊಲೆಯಾಗಿದ್ದು, ಸರ್ಕಾರವೇ ನೇರ ಹೊಣೆಯಾಗಿದೆ.

ಸಿಟಿ ರವಿಯನ್ನು ಟೆರರಿಸ್ಟ್ ರೀತಿ ನಡೆಸಿಕೊಳ್ಳಲಾಗಿದೆ: ನ್ಯಾಯಾಂಗ ತನಿಖೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ವಿಧಾನ ಪರಿಷತ್ತಿನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ದೂರಿನ ಆಧಾರದ ಮೇಲೆ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದರು.

ಸಿ.ಟಿ ರವಿಗೆ ರಕ್ಷಣೆ ನೀಡಲು ರಾಜ್ಯಪಾಲರಿಗೆ ಮನವಿ, ನ್ಯಾಯಾಂಗ ತನಿಖೆಗೆ ಆಗ್ರಹ: ಪ್ರತಿಪಕ್ಷ ನಾಯಕ ಆರ್.ಅಶೋಕ
ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಶಾಸಕ ಸಿ.ಟಿ.ರವಿ ಅವರಿಗೆ ಮಾಡಿದ ಅಪಮಾನದ ಬಗ್ಗೆ ತಿಳಿಸಲಾಗಿದೆ.

