ರಾಜಕೀಯಅಧಿಕಾರಕ್ಕಾಗಿ ಪಕ್ಷಾಂತರದ ಪ್ರವೃತ್ತಿಗೆ ಕಡಿವಾಣ ಹಾಕಬೇಕು: ಡಿ.ಕೆ. ಶಿವಕುಮಾರ್
ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು, ಪಕ್ಷಾಂತರ ಮಾಡಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ವಾಪಸ್ ತೆಗೆದುಕೊಳ್ಳುವುದು, ಒಂದು ಪಕ್ಷದಲ್ಲಿದ್ದು, ಮತ್ತೊಂದು ಪಕ್ಷವನ್ನು ಅಧಿಕಾರಕ್ಕೆ ತರಲು ರಾಜೀನಾಮೆ ನೀಡುವ ಪ್ರವೃತ್ತಿಗೆ ಕಡಿವಾಣ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ. ಯಾರು ಗೆಲ್ಲುತ್ತಾರೋ ಅವರು ಅಧಿಕಾರ ಪಡೆಯಲಿ, ಆದರೆ ಅಧಿಕಾರ ಹಸ್ತಾಂತರಕ್ಕೆ ಪಕ್ಷಾಂತರ ಮಾಡುವುದು ವ್ಯವಸ್ಥೆಗೆ ವಿರುದ್ಧವಾದುದು. ಇದಕ್ಕೆ ಅವಕಾಶ ನೀಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಪಾದಿಸಿದ್ದಾರೆ.