ರಾಜ್ಯಬೆಂಗಳೂರಿನಲ್ಲಿ ಪಟಾಕಿ ದುರಂತ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ; ಎಚ್ಡಿ ಕುಮಾರಸ್ವಾಮಿ
ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಗೋದಾಮಿನಲ್ಲಿ ಸಂಭವಿದ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ಸಾವಿಗೆ ಸಂತಾಪ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ಘಟನೆ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.