ಪಟ್ಲ ಬೆಟ್ಟ

ಸಕಲೇಶಪುರ: ಪಟ್ಲ ಬೆಟ್ಟಕ್ಕೆ ಪ್ರವಾಸಿಗರ ಭೇಟಿ ನಿಷೇಧಿಸಿದ ಅರಣ್ಯ ಇಲಾಖೆ
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಪ್ರವಾಸಿಗರೊಬ್ಬರು ಸ್ವಂತ ವಾಹನದಲ್ಲಿ ಗಿರಿಧಾಮಕ್ಕೆ ಭೇಟಿ ನೀಡಿದ್ದ ವೇಳೆ ಹಲ್ಲೆಗೆ ಒಳಗಾಗಿದ್ದರು. ಯಸಳೂರು ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಪಟ್ಲ ಬೆಟ್ಟದಲ್ಲಿ ಪ್ರವಾಸಿಗರ ಮೇಲೆ ಹಲ್ಲೆ, ಅನಧಿಕೃತ ರಸ್ತೆ ನಿರ್ಮಾಣ: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ
ಬೆಟ್ಟದ ತುದಿಗೆ ರಸ್ತೆ ನಿರ್ಮಿಸಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಲಾಗಿದೆಯೇ ಅಥವಾ ಇಲ್ಲವೇ ಮತ್ತು ರಸ್ತೆಗಾಗಿ ಅಕ್ರಮವಾಗಿ ಮರಗಳನ್ನು ಕಡಿಯಲಾಗಿದೆಯೇ ಎಂಬ ಬಗ್ಗೆ ವಿವರವಾದ ವರದಿ ನೀಡುವಂತೆ ಅರಣ್ಯ ಸಚಿವರು ಸೂಚಿಸಿದ್ದಾರೆ.

ಸಕಲೇಶಪುರ: ಪಟ್ಲ ಬೆಟ್ಟದಲ್ಲಿ ಚಾಲಕರಿಂದ ಪ್ರವಾಸಿಗರ ಮೇಲೆ ಹಲ್ಲೆ
ಜೀಪ್ ಚಾಲಕರ ಗುಂಪು, ಪ್ರವಾಸಿಗರಿಗೆ ಬೈಕ್‌ಗಳಲ್ಲಿ ಹೋಗಬೇಡಿ ಎಂದಿದ್ದಾರೆ. ಬೆಟ್ಟಕ್ಕೆ ತೆರಳಬೇಕಾದರೆ ಬಾಡಿಗೆ ಜೀಪಿನಲ್ಲೇ ಹೋಗಬೇಕು. ಬೇರೆ ವಾಹನಗಳನ್ನು ಬಿಡುವುದಿಲ್ಲ ಎಂದು ಬೈಕ್ ಸವಾರರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ.

