ರಾಜ್ಯಬೆಂಗಳೂರು: ವರದಕ್ಷಿಣೆ ತರಲಿಲ್ಲವೆಂದು ಪತ್ನಿಯ ಖಾಸಗಿ ಅಂಗಗಳ ಮೇಲೆ ಆ್ಯಸಿಡ್ ಎರಚಿದ ಪತಿ!
ವರದಕ್ಷಿಣೆ ತರಲಿಲ್ಲ ಎಂಬ ಕಾರಣಕ್ಕೆ ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಗಳ ಮೇಲೆ ಟಾಯ್ಲೆಟ್ ಕ್ಲೀನಿಂಗ್ ಆ್ಯಸಿಡ್ ಎರಚಿರುವ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಪತ್ನಿ ನೀಡಿದ ದೂರಿನ ಮೇರೆಗೆ ಪೊಲೀಸರು ಪತಿ ಮತ್ತು ಅತ್ತೆ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.