ಪಬ್

ದಕ್ಷಿಣ ಆಫ್ರಿಕಾ ಪಬ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ: 9 ಮಂದಿ ಸಾವು, 10 ಜನರಿಗೆ ಗಾಯ
ಜೋಹಾನ್ಸ್‌ಬರ್ಗ್‌ನಿಂದ ಪಶ್ಚಿಮಕ್ಕೆ 46 ಕಿಲೋಮೀಟರ್ ದೂರದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಬೆಳಗಿನ ಜಾವ 1 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಬೆಂಗಳೂರು: ಪಬ್‌ನ ಶೌಚಾಲಯದಲ್ಲಿ 31 ವರ್ಷದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆ!
ಮೃತರನ್ನು ಮೇಘರಾಜ್ ಎಂದು ಗುರುತಿಸಲಾಗಿದ್ದು, ಅವರಿಗೆ ಪತ್ನಿ ಮತ್ತು ಆರು ತಿಂಗಳ ಮಗು ಇದೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.

ನಿಯಮ ಉಲ್ಲಂಘನೆ: ದಿನನಿತ್ಯದ CCTV ದೃಶ್ಯಾವಳಿಗಳ ಸಲ್ಲಿಸುವಂತೆ ಪಬ್-ರೆಸ್ಟೋರೆಂಟ್ ಮಾಲೀಕರಿಗೆ CCB ಸೂಚನೆ
ಪೆನ್‌ಡ್ರೈವ್ ಅಥವಾ ಸಿಡಿಗೆ ಹಾಕಿ ವಿಡಿಯೋ ನೀಡಬೇಕು. ಸಿಸಿಟಿವಿ ವೀಕ್ಷಣೆ ವೇಳೆ ತಪ್ಪು ಕಂಡುಬಂದಲ್ಲಿ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುವುದು ಎಂದು ಎಚ್ಚರಿಕೆಯನ್ನೂ ನೀಡಿದೆ.

ಪಬ್ ಹೊರಗೆ 2 ಗುಂಪುಗಳ ನಡುವೆ ಮಾರಾಮಾರಿ: ಮೂವರ ಬಂಧನ
ಜೂನ್ 7ರಂದು ಮಧ್ಯರಾತ್ರಿ 1ರ ಸುಮಾರಿಗೆ ಕೋರಮಂಗಲದ ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಬ್ ಹೊರಗೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿತ್ತು.

ನಿಯಮ ಉಲ್ಲಂಘನೆ ಆರೋಪ: ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ FIR ದಾಖಲು
ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು.

ಸ್ಟಾರ್ ನಟ ಸೇರಿ ಚಿತ್ರತಂಡ ಅವಧಿ ಮೀರಿ ಪಬ್ ನಲ್ಲಿ ಪಾರ್ಟಿ?: ಕೊನೆಗೂ ಪೊಲೀಸರಿಂದ ಎಫ್ಐಆರ್ ದಾಖಲು!
ಅವಧಿ ಮೀರಿ ಬೆಳಗಿನ ಜಾವದವರೆಗೆ ಸ್ಟಾರ್ ನಟ ಮತ್ತು ಅವರ ಸ್ನೇಹಿತರ ಬಳಗ, ಚಿತ್ರತಂಡ ಬೆಂಗಳೂರಿನ ಪಬ್ ವೊಂದರಲ್ಲಿ ಪಾರ್ಟಿ ಮಾಡಿರುವ ಪ್ರಕರಣದಲ್ಲಿ ಪಬ್ (Pub) ಮಾಲೀಕರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಟೆರೇಸ್ ಮೇಲೆ ಪಬ್ ನಡೆಸುತ್ತಿರುವವರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದು!
ಕೋರಮಂಗಲದ ಹುಕ್ಕಾ ಬಾರ್ ಮಡ್ಪೈಪ್ ಕೆಫೆಯಲ್ಲಿ ಅಗ್ನಿ ದುರಂತ ಸಂಭವಿಸಿದ ಬಳಿಕ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ನಗರದ ಪಬ್, ಬಾರ್ ಮತ್ತು ರೆಸ್ಟೋರೆಂಟ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪರಿಶೀಲನೆ ವೇಳೆ ನಿಯಮಗಳ ಉಲ್ಲಂಘಿಸಿ ಟೆರೇಸ್ ಗಳ ಮೇಲೆ ಪಬ್ ಗಳನ್ನು ನಡೆಸುತ್ತಿರುವ ವಿರುದ್ಧ ಕ್ರಮ ಕೈಗೊಳ್ಳುತ್ತಿದೆ.

ಬೆಂಗಳೂರು: ಹೋಟೆಲ್, ಬಾರ್ ಗಳಲ್ಲಿ ಇನ್ನು ಮುಂದೆ ಸಿಸಿಟಿವಿ ಅಳವಡಿಕೆ ಕಡ್ಡಾಯ!
ಸುರಕ್ಷತೆ ದೃಷ್ಟಿಯಿಂದ ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಅಂಗಡಿಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ವಾಣಿಜ್ಯ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಕಡ್ಡಾಯವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಶನಿವಾರ ಹೇಳಿದರು.

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಬಹುಮಹಡಿ ಕಟ್ಟಡದ ಪಬ್ ನಲ್ಲಿ ಬೆಂಕಿ, ಇಬ್ಬರಿಗೆ ಗಂಭೀರ ಗಾಯ
ರಾಜಧಾನಿ ಬೆಂಗಳೂರಿನಲ್ಲಿ ಇಂದು ಬುಧವಾರ ಮತ್ತೊಂದು ಅಗ್ನಿದುರಂತ ಸಂಭವಿಸಿದೆ. ಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್ ವೊಂದರಲ್ಲಿ ಸಿಲಿಂಡರ್ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ.

