ರಾಜ್ಯಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ: ತನಿಖೆಗೆ ಸೂಚಿಸಲಾಗಿದೆ ಎಂದ ಗೃಹ ಸಚಿವ ಪರಮೇಶ್ವರ್
ಬಿಜೆಪಿ ಮುಖಂಡ ಪೃಥ್ವಿಸಿಂಗ್ ಅವರ ಮೇಲೆ ಹಲ್ಲೆ ನಡೆದ ವಿಚಾರ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಿ ವರದಿ ನೀಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಂಗಳವಾರ ಹೇಳಿದರು.