ದೇಶಮಕ್ಕಳನ್ನು ಬೇರೆಯವರ ಜೊತೆ ಹೋಲಿಸಬೇಡಿ; ವಿದ್ಯಾರ್ಥಿಗಳು ಇಚ್ಛಾಶಕ್ತಿ, ಮಹತ್ವಾಕಾಂಕ್ಷೆ ಬೆಳೆಸಿಕೊಳ್ಳಿ: 'ಪರೀಕ್ಷಾ ಪೇ ಚರ್ಚಾ'ದಲ್ಲಿ ಪಿಎಂ ಮೋದಿ!
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 'ಪರೀಕ್ಷಾ ಪೇ ಚರ್ಚಾ 2024' ರ ಭಾಗವಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಇಂದು ಸೋಮವಾರ ನೇರ ಸಂವಾದದಲ್ಲಿ ಭಾಗವಹಿಸಿದರು. ಕಾರ್ಯಕ್ರಮವು ಇಂದು ಬೆಳಗ್ಗೆ 11 ಗಂಟೆಗೆ ದೆಹಲಿಯ ಐಟಿಪಿಒದ ಭಾರತ ಮಂಟಪ ಸಭಾಂಗಣದಲ್ಲಿ ನೆರವೇರಿತು.