ರಾಜ್ಯರೈತರ ಮನೆ ಬಾಗಿಲಿಗೆ ಪಶುಸಂಜೀವಿನಿ: ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಪಶುಸಂಜೀವಿನಿ ಲೋಕಾರ್ಪಣೆ ಮಾಡಿದರು. ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಇದನ್ನು ಜಾರಿಗೆ ತರಲಾಗುತ್ತಿದ್ದು ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದ್ದು ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ.