ಪಾರಿವಾಳ

ರಾಜಸ್ಥಾನ: ಆಭರಣ ಅಂಗಡಿಯಿಂದ ಚಿನ್ನದ ಸರ ಕಚ್ಚಿ ಹಾರಿಹೋದ ಪಾರಿವಾಳ; ನಂತರ ಏನಾಯ್ತು, ಈ ಸುದ್ದಿ ಓದಿ; Video
ದೇಗಾನಾ ಬುಲಿಯನ್ ಮಾರ್ಕೆಟ್‌ನಲ್ಲಿರುವ ಚಿನ್ನಾಭರಣ ಮಳಿಗೆಯೊಂದರ ಮೇಲಿನ ಮಹಡಿಯಲ್ಲಿ ಕುಶಲಕರ್ಮಿಗಳು ಚಿನ್ನದ ಆಭರಣಗಳನ್ನು ತಯಾರಿಸುವ ಕೆಲಸದಲ್ಲಿ ನಿರತರಾಗಿದ್ದರು.

ಎಚ್ಚರ.. ಎಚ್ಚರ: ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ..!
ಹೊಸ ನಿಯಮದಂತೆ ನಿಯಮ ಉಲ್ಲಂಘಿಸಿ ಪಾರಿವಾಳಗಳಿಗೆ ಆಹಾರ ನೀಡಿದವರಿಗೆ, ಸಾಂಕ್ರಾಮಿಕ ರೋಗ ಹರಡಿದ ನಿರ್ಲಕ್ಷ್ಯದ ಪ್ರಕರಣ ದಾಖಲಿಸಲಾಗುತ್ತದೆ. ಅವರಿಗೆ ದಂಡ ಹಾಗೂ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.

ಜಮ್ಮು ರೈಲು ನಿಲ್ದಾಣ ಸ್ಫೋಟಿಸುವ ಸಂದೇಶ ಹೊತ್ತೊಯ್ಯುತ್ತಿದ್ದ ಪಾರಿವಾಳ ಸೆರೆ
ಜಮ್ಮು ರೈಲು ನಿಲ್ದಾಣವನ್ನು ಸ್ಫೋಟಿಸುವ ಸಂದೇಶವನ್ನು ಹೊತ್ತ ಚೀಟಿಯನ್ನು ಅದರ ಉಗುರುಗಳಿಗೆ ಕಟ್ಟಲಾಗಿತ್ತು," ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯದುವೀರ್ ನೇತೃತ್ವದ ಸಭೆ ಯಶಸ್ವಿ: ಮೈಸೂರು ಅರಮನೆ ಮುಂಭಾಗ ಪಾರಿವಾಳಗಳಿಗೆ ಕಾಳು ಹಾಕುವ ಪದ್ಧತಿಗೆ ಬ್ರೇಕ್..!
ಪಾರಿವಾಳಗಳಿಗೆ ಆಹಾರ ಹಾಕುವ ಪದ್ದತಿ ರದ್ದತಿ ಮತ್ತು ಕಾಳು ಹಾಕುವುದರಿಂದ ಉದ್ಭವಿಸುವ ಸಮಸ್ಯೆಗಳ ವಿಚಾರವಾಗಿ ಇಂದು (ಸೆ.22) ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಬಳಿ ನಾಗರೀಕರ ಜಾಗೃತ ಸಭೆ ನಡೆಯಿತು. ಕಾರ್ಯಕ್ರಮದಲ್ಲಿ ವೈದ್ಯರು, ಪರಿಸರವಾದಿಗಳು, ಸಾಮಾಜಿಕ ತಜ್ಞರು ಸೇರಿ ಹಲವರು ಭಾಗಿಯಾಗಿದ್ದರು.

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಿ ಪ್ರಾಣ ಕಳೆದುಕೊಂಡ ಬಾಲಕ!
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದ ಓಬಳಸ್ವಾಮಿ ಎಂಬವರ ಪುತ್ರ ರಾಮಚಂದ್ರ (12) ಮೃತ ಬಾಲಕ. ಗ್ರಾಮದ ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ.

ಹುಬ್ಬಳ್ಳಿ: 23 ಪಾರಿವಾಳಗಳ ಕುತ್ತಿಗೆ ಕೊಯ್ದು ಕೊಂದ ದುಷ್ಕರ್ಮಿಗಳು; ಹಳೆ ವೈಷಮ್ಯ ಕಾರಣ!
ಹುಬ್ಬಳ್ಳಿ ನಗರದಲ್ಲಿ ಹಳೆ ವೈಷಮ್ಯದಿಂದಾಗಿ ದುಷ್ಕರ್ಮಿಗಳು 23 ಪಾರಿವಾಳಗಳನ್ನು ಕೊಂದಿರುವ ಮನಕಲಕುವ ಘಟನೆ ನಡೆದಿದೆ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಯಾವಗಲ್ ಬಡಾವಣೆಯ ಮನೆಯೊಂದರಲ್ಲಿ ಶನಿವಾರ ಈ ಘಟನೆ ನಡೆದಿದೆ.

ಆಸ್ತಮಾ ರಾಜಧಾನಿ ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದೆ ಪಾರಿವಾಳಗಳ ಹಿಕ್ಕೆ!
ಆಸ್ತಮಾ ರಾಜಧಾನಿ ಬೆಂಗಳೂರಿನಲ್ಲಿ ಪಾರಿವಾಳಗಳ ಸಂತತಿ ಹೆಚ್ಚುತ್ತಿದ್ದು, ಇದರಿಂದ ಮನುಷ್ಯರಲ್ಲಿ ಹೈಪರ್‌ಸೆನ್ಸಿಟಿವ್ ನ್ಯುಮೋನಿಟಿಸ್(HP) ಮತ್ತು ಇತರ ಶ್ವಾಸಕೋಶದ ಸೋಂಕಿನ ಪ್ರಕರಣಗಳು ಹೆಚ್ಚು ವರದಿಯಾಗುತ್ತಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು: ಪಾರಿವಾಳ ಹಿಡಿಯಲು ಹೋಗಿ ಹೈಟೆನ್ಷನ್ ವಯರ್ ಸ್ಪರ್ಶಿಸಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವು
3 ದಿನಗಳ ಹಿಂದೆ ಹೈಟೆನ್ಷನ್ ವಯರ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಬಾಲಕರ ಪೈಕಿ ಓರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.

ಪಾಕ್ ನಿಂದ ಹಾರಿಬಂದ ಪಾರಿವಾಳದ ವಿರುದ್ಧ ಎಫ್ ಐಆರ್ ದಾಖಲಿಸಲು ಬಿಎಸ್ಎಫ್ ಒತ್ತಾಯ!
ಪಾಕಿಸ್ತಾನದಿಂದ ವಿಚಿತ್ರ ಆಗಂತುಕನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಗಡಿ ಭದ್ರತಾ ಪಡೆ ಬಿಎಸ್ ಎಫ್ ಒತ್ತಾಯ ಮಾಡುತ್ತಿದೆ.

