ರಾಜ್ಯರಸ್ತೆ ಅಗಲೀಕರಣಕ್ಕೆ ಭೂಮಿ ನೀಡುವರಿಗೆ ತಕ್ಷಣವೇ ಟಿಡಿಆರ್ ಪ್ರಮಾಣಪತ್ರ; ಮೇಯರ್ ಭರವಸೆ
ರಸ್ತೆ ವಿಸ್ತರಣೆಗೆ ಭೂಮಿ ನೀಡುವವರಿಗೆ ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಪ್ರಮಾಣಪತ್ರಗಳ ವಿತರಣೆ ವಿಳಂಬವಾಗುತ್ತಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಪಕ್ಷಾತೀತವಾಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ಪಾಲಿಕೆಯ ಮಾಸಿಕ ಸಭೆಯಲ್ಲಿ ನಡೆಯಿತು.