ಪಾಸಿಟಿವ್ ಕೇಸ್ ಗಳು

ಮುಂಬೈ-ಗೋವಾ ರೈಲಿನಲ್ಲಿ ಸಂಚರಿಸಿದ ಏಳು ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್!
ಮುಂಬೈ-ಗೋವಾ ರೈಲಿನಲ್ಲಿ ರಾಜ್ಯಕ್ಕೆ ಬಂದ ಪ್ರಯಾಣಿಕರ ಪೈಕಿ ಏಳು ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಇರುವುದು ವೈದ್ಯಕೀಯ ಪರೀಕ್ಷೆಯಿಂದ ಖಚಿತವಾಗಿದೆ..ಪರಿಣಾಮ ರಾಜ್ಯದಲ್ಲಿ ಸೋಂಕಿತ ಸಂಖ್ಯೆ ಈವರೆಗೆ 29 ಕ್ಕೆ ತಲುಪಿದೆ ಎಂದು ರಾಜ್ಯದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಸೋಮವಾರ ಹೇಳಿದ್ದಾರೆ.

ದಾವಣಗೆರೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ!
ವಾರದ ಹಿಂದಷ್ಟೇ ಹಸಿರು ವಲಯದಲ್ಲಿದ್ದ ದಾವಣಗೆರೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 21 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ದಾವಣೆಗೆರೆ ಕೆಂಪು ವಲಯದತ್ತ ಸಾಗುತ್ತಿದೆ.

ರಾಜ್ಯದಲ್ಲಿ ಇಂದು ಮೂವರಿಗೆ ಕೋವಿಡ್-19 ಸೋಂಕು! ಒಟ್ಟು ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆ
ರಾಜ್ಯದಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಕೇವಲ 3ಕ್ಕೆ ಇಳಿದಿದ್ದು, ಜನತೆಯಲ್ಲಿ ಸ್ವಲ್ಪ ಮಟ್ಟಿನ ಸಮಾಧಾನ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1 ಹಾಗೂ ಕಲಬುರಗಿಯಲ್ಲಿ ಎರಡು ಪ್ರಕರಣ ವರದಿಯಾಗುವುದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ

ರಾಜ್ಯದಲ್ಲಿ ಕೋವಿಡ್-19: ಒಂದೇ ದಿನ 12 ಹೊಸ ಪ್ರಕರಣ: ಸೋಂಕಿತರ ಸಂಖ್ಯೆ 175ಕ್ಕೇರಿಕೆ
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇಂದು ಮತ್ತೆ 12 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 25 ಮಂದಿ ಗುಣಮುಖರಾಗಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.

