ರಾಜಕೀಯಮೋದಿ ಮಾತು ಬಾಯಿಬಿಟ್ಟರೆ ಬಣ್ಣಗೇಡು; ಕೈಲಾಗದ ನಾಯಕನ ಗೋಳಾಟ; ಸಿದ್ದರಾಮಯ್ಯ ವ್ಯಂಗ್ಯ
ಪ್ರಧಾನಿ ನರೇಂದ್ರ ಮೋದಿಯವರ ಮಾತುಗಳು "ಬಾಯಿ ಬಿಟ್ಟರೆ ಬಣ್ಣಗೇಡು" ಎಂಬಂತಾಗಿದೆ ಎಂದು ಟೀಕಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವುದೇ ನಿರ್ದಿಷ್ಟ ಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳಾಟದಂತೆ ಎಂದು ಅಪಹಾಸ್ಯ ಮಾಡಿದ್ದಾರೆ.