ಪಿಎಸ್ ಐ ನೇಮಕಾತಿ ಹಗರಣ

PSI ಮರುಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು!
ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಮರು ಪರೀಕ್ಷೆಗೆ ಆದೇಶಿಸಿ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಮರುಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಆದರೆ ಸ್ವತಂತ್ರ ಸಂಸ್ಥೆ ಮೂಲಕ ಮರುಪರೀಕ್ಷೆ ನಡೆಸುವಂತೆ ಸೂಚನೆ ನೀಡಿದೆ.

ಪಿಎಸ್ ಐ ನೇಮಕಾತಿ ಹಗರಣ: ನೂತನ ಕಾಂಗ್ರೆಸ್ ಸರ್ಕಾರದಿಂದ ಪ್ರಕರಣದ ಮರು ತನಿಖೆ
ಆಡಳಿತಾರೂಢ ಕಾಂಗ್ರೆಸ್ ರಾಜ್ಯದಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಹಗರಣದ ಮರು ತನಿಖೆ ನಡೆಸಲಿದೆ.

ಪಿಎಸ್‌ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ನ್ಯಾಯಾಲಯಕ್ಕೆ ಶರಣು
ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಆರ್‌ಡಿ ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಸೋಮವಾರ ಕಲಬುರಗಿಯ ನ್ಯಾಯಾಲಯಕ್ಕೆ ಶರಣಾದರು. ಇತ್ತೀಚಿಗೆ ಈತನ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.

ಪಿಎಸ್ಐ ನೇಮಕಾತಿ ಹಗರಣದಲ್ಲಿ ಅಭ್ಯರ್ಥಿ ನೀಡಿದ ಗರಿಷ್ಠ ಲಂಚದ ಮೊತ್ತ 85 ಲಕ್ಷ ರೂ.: ಸಿಐಡಿ ಬಹಿರಂಗ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಅಪರಾಧ ತನಿಖಾ ದಳ(CID), ಆರೋಪಿಗಳಿಂದ 3.11 ಕೋಟಿ ರೂಪಾಯಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ಡಿವೈಎಸ್ಪಿ ಕಪಾಳ ಮೋಕ್ಷ, ಮನುಷ್ಯತ್ವವಿಲ್ಲದ ಸರ್ಕಾರ- ಸಿದ್ದು
ಪಿಎಸ್ ಐ ನೇಮಕಾತಿ ಪ್ರಕರಣದ ಸಂತ್ರಸ್ತರಿಗೆ ತುಮಕೂರು ಡಿವೈಎಸ್ಪಿ ಪಿ. ಶ್ರೀನಿವಾಸ್ ಕಪಾಳ ಮಾಡಿದ್ದಾರೆ ಎಂದು ಆರೋಪಿಸಲಾದ ವಿಡಿಯೋ ವೈರಲ್ ಆಗಿದೆ.

ಜಮ್ಮು- ಕಾಶ್ಮೀರ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣ: ಬೆಂಗಳೂರಿನ 36 ಕಡೆ ಸಿಬಿಐ ದಾಳಿ, ಪರಿಶೀಲನೆ
ಜಮ್ಮು ಮತ್ತು ಕಾಶ್ಮೀರದ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಮಂಗಳವಾರ ಬೆಂಗಳೂರಿನ ಕೆಲವು ಸೇರಿದಂತೆ 36 ಸ್ಥಳಗಳಲ್ಲಿ ಶೋಧ ನಡೆಸಿದೆ.

ಪಿಎಸ್‌ಐ ನೇಮಕಾತಿ ಹಗರಣ: ಎರಡನೇ ಚಾರ್ಜ್‌ಶೀಟ್‌ನಲ್ಲಿ ಡಿವೈಎಸ್‌ಪಿ ಶಾಂತಕುಮಾರ್ ಹೆಸರು ಉಲ್ಲೇಖ
ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದ ಎರಡನೇ ಆರೋಪ ಪಟ್ಟಿಯನ್ನು ಸಿಐಡಿ ಬುಧವಾರ ನಗರದ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಪಿಎಸ್‌ಐ ನೇಮಕಾತಿ ಹಗರಣ: ವಿಜಯೇಂದ್ರ, ಅಶ್ವತ್ಥನಾರಾಯಣ ಪಾಲು ಇದೆ- ಸಿದ್ದರಾಮಯ್ಯ
ಪಿಎಸ್ಐ ನೇಮಕಾತಿ ಹಗರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಮತ್ತು ಐಟಿ-ಬಿಟಿ ಸಚಿವ ಅಶ್ವಥ್ ನಾರಾಯಣ್ ಭಾಗಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಆರೋಪಿಸಿದ್ದಾರೆ.

ಪಿಎಸ್ ಐ ನೇಮಕಾತಿ ಹಗರಣ: ಕಪಾಟಿನೊಳಗಿಂದ ಒಂದೊಂದೇ ಅಸ್ತಿಪಂಜರ ಹೊರಗೆ ಬೀಳುತ್ತಿವೆ; ಸಿದ್ದರಾಮಯ್ಯ, ರಾಹುಲ್ ವಾಗ್ದಾಳಿ
ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಅಧಿಕಾರಿಗಳನ್ನು ಮಾತ್ರ ಹೊಣೆಮಾಡಿ ಜಾರಿಕೊಳ್ಳುವುದು ಬೇಡ. ಈ ಹಗರಣಕ್ಕೆ ಅಧಿಕಾರಿಗಳಷ್ಟೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೂ ಕಾರಣ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

