ಪಿಎಸ್ ಐ ಹಗರಣ

ಪಿಎಸ್‌ಐ ಹಗರಣ: ರಾಜ್ಯ ಸರ್ಕಾರಕ್ಕೆ ತನಿಖಾ ಸಮಿತಿ ವರದಿ ಸಲ್ಲಿಕೆ
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದ ತನಿಖೆಗಾಗಿ ರಚಿಸಲಾಗಿರುವ ನ್ಯಾಯಮೂರ್ತಿ ಬಿ ವೀರಪ್ಪ ಸಮಿತಿಯು ಸೋಮವಾರ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದ್ದು, ಸಿಐಡಿಗೆ ಹೆಚ್ಚಿನ ತನಿಖೆಗೆ ಶಿಫಾರಸು ಮಾಡಿದೆ.

ಪಿಎಸ್‌ಐ ಹಗರಣ: ನ್ಯಾಯಾಂಗ ಆಯೋಗಕ್ಕೆ ಸಿಗದ ಸಹಕಾರ; ತನಿಖೆ ಪೂರ್ಣಗೊಳ್ಳದ ಹೊರತು ನೇಮಕವಿಲ್ಲ ಎಂದ ಸರ್ಕಾರ!
ಬಿಜೆಪಿ ಆಡಳಿತಾವಧಿಯಲ್ಲಿ ಬಯಲಾದ ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಏಕಸದಸ್ಯ ತನಿಖಾ ಆಯೋಗಕ್ಕೆ ಪ್ರತಿವಾದಿಗಳಿಂದ ಸೂಕ್ತ ಸಹಕಾರ ಸಿಗುತ್ತಿಲ್ಲ, ಹೀಗಾಗಿ ತನಿಖೆಗೆ ಅಡ್ಡಿಯಾಗಿದೆ.

ಪಿಎಸ್ ಐ ನೇಮಕಾತಿ ಹಗರಣ: ಪ್ರಾಮಾಣಿಕ- ಅಮಾಯಕ ಅಭ್ಯರ್ಥಿಗಳನ್ನು ರಕ್ಷಿಸಬೇಕು; ಸಿದ್ದರಾಮಯ್ಯ ,ಎಚ್ ಡಿಕೆ ಆಗ್ರಹ
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದರು, ಜೊತೆಗೆ ಸರ್ಕಾರವು ಅಮಾಯಕ ಅಭ್ಯರ್ಥಿಗಳ ಹಿತಾಸಕ್ತಿ ಕಾಪಾಡುವಂತೆ ಸೂಚಿಸಿದರು.

ಪಿಎಸ್‌ಐ ನೇಮಕಾತಿ ಹಗರಣದ ನ್ಯಾಯಯುತ ತನಿಖೆಯನ್ನು ನಾವು ನಿರೀಕ್ಷಿಸಬಹುದೇ?: ಕರ್ನಾಟಕ ಹೈಕೋರ್ಟ್ ಪ್ರಶ್ನೆ
ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ, ಇದು ಕೊಲೆಗಿಂತ ಗಂಭೀರವಾದ ಅಪರಾಧ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಪಿಎಸ್‌ಐ ಹಗರಣದಲ್ಲಿ ಭಾಗಿಯಾಗಿರುವ ಸಚಿವರ ಹೆಸರು ಬಹಿರಂಗಪಡಿಸಲು ಅಮೃತ್ ಪೌಲ್ ಸಿದ್ಧ, ಆದರೆ..!: ಡಿಕೆ ಶಿವಕುಮಾರ್
ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಬಂಧನಕ್ಕೊಳಗಾಗಿರುವ ಎಡಿಜಿಪಿ ಅಮೃತ್ ಪೌಲ್ ಈ ಹಗರಣದಲ್ಲಿ ಭಾಗಿಯಾಗಿರುವ ಸಚಿವರು, ನಾಯಕರ ಹೆಸರನ್ನು ಬಹಿರಂಗಪಡಿಸಲು ಸಿದ್ಧವಿದ್ದರೂ ತನಿಖಾಧಿಕಾರಿಗಳು ಅದನ್ನು ದಾಖಲಿಸಿಕೊಳ್ಳುತ್ತಿಲ್ಲ.

