ಪಿಐಎಲ್

SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL
ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿರುವ ಅರ್ಜಿಯಲ್ಲಿ, ಚುನಾವಣಾ ಆಯುಕ್ತರ ಬಹುಮತದ ಒಪ್ಪಿಗೆಯಿಲ್ಲದೆ ಚುನಾವಣಾ ಆಯೋಗ ಕೈಗೊಂಡಿರುವ ಎಲ್ಲ ನಿರ್ಧಾರಗಳನ್ನು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಘೋಷಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.

'ವಂದೇ ಮಾತರಂ' ಮೊದಲ ಎರಡು ಚರಣಗಳಿಗೆ ಸೀಮಿತ: ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ PIL
ವಕೀಲ ಗಿರೀಶ್ ಭಾರದ್ವಾಜ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ, ‘ರಾಷ್ಟ್ರಗೀತೆ’ಯಂತಹ ರಾಷ್ಟ್ರೀಯ ಸಂಕೇತದ ಸ್ವರೂಪ ಮತ್ತು ವಿಷಯವನ್ನು ರಾಜ್ಯ ಸರ್ಕಾರವು ಕಾರ್ಯಾಂಗ ಆದೇಶದ ಮೂಲಕ ನಿಗದಿಪಡಿಸಬಹುದೇ ಎಂಬ ಪ್ರಶ್ನೆಯನ್ನು ಎತ್ತಲಾಗಿದೆ.

ಹೆಬ್ಬಾಳ ಸುರಂಗ ರಸ್ತೆ ಯೋಜನೆ: PIL ಗೆ 10 ದಿನಗಳೊಳಗೆ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಯೋಜನೆಯಿಂದ ಪರಿಸರದ ಮೇಲೆ ಉಂಟಾಗುವ ಪರಿಣಾಮದ ಕುರಿತು ಯಾವುದೇ ಅಧ್ಯಯನ ನಡೆಸಲಾಗಿದೆಯೇ, ವಿಶೇಷವಾಗಿ ಹೆಬ್ಬಾಳ ಕೆರೆಗೆ ನೀರಿನ ಒಳಹರಿವು ಮತ್ತು ಹೊರಹರಿವು ಅಡ್ಡಿಯಾಗುತ್ತದೆಯೇ, ಜಲಮಾರ್ಗಗಳಿಗೆ ತೊಂದರೆಯಾಗುತ್ತದೆಯೇ ಎಂಬ ವಿವರಗಳನ್ನು ದಾಖಲಾತಿಗಳೊಂದಿಗೆ 10 ದಿನಗಳೊಳಗೆ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ.

SIR ಕಾಲಮಿತಿ ವಿಸ್ತರಣೆಗೆ ಮನವಿ: ಸಾಹಿತಿ ದೇವನೂರು ಮಹಾದೇವ, ಇತಿಹಾಸಕಾರ ಗುಹಾ ಮತ್ತಿತರರ PIL ಅರ್ಜಿ ಮುಂದೂಡಿಕೆ!
SIR ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದ ವ್ಯಕ್ತಿಗಳಿಗೆ ರಾಜ್ಯ ಸರ್ಕಾರವು ಯಾವುದೇ ಸಾಮಾಜಿಕ ಕಲ್ಯಾಣ ಯೋಜನೆಗಳ ಸೌಲಭ್ಯವನ್ನು ರದ್ದುಗೊಳಿಸದಂತೆ ನಿರ್ದೇಶನ ನೀಡಬೇಕೆಂದೂ ಅರ್ಜಿದಾರರು ಕೋರಿದ್ದಾರೆ.

ಬೆಂಗಳೂರು ಸುರಂಗ ರಸ್ತೆ ಯೋಜನೆ ವಿರುದ್ಧ ಸಂಸದ Tejasvi Surya PIL
ಈ ವಿಷಯವನ್ನು ಜುಲೈ 6 ರಂದು ವಿಚಾರಣೆಗೆ ಪಟ್ಟಿ ಮಾಡಲಾಗುತ್ತದೆ ಎಂದು ಸಂಸದರು ತಿಳಿಸಿದ್ದಾರೆ. ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಸೋಮವಾರ ಕರ್ನಾಟಕ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ.

ತುಮಕೂರಿನಲ್ಲಿ ಕಾಂಗ್ರೆಸ್ ಭವನ ಟ್ರಸ್ಟ್‌ಗೆ ಎರಡು ಎಕರೆ ಭೂಮಿ ಅಕ್ರಮ ಮಂಜೂರು: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ತುಮಕೂರು ನಗರದಲ್ಲಿ ಸಾರ್ವಜನಿಕ ಉಪಯೋಗ ಸೇವೆಗೆ ಮೀಸಲಿದ್ದ ಎರಡು ಎಕರೆ ಸರ್ಕಾರಿ ಭೂಮಿಯನ್ನು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ಆರೋಪ ಕುರಿತು ಪಿಐಎಲ್ ಗೆ ರಾಜ್ಯ ಸರ್ಕಾರಕ್ಕೆ ಮತ್ತು ತುಮಕೂರು ಜಿಲ್ಲಾಧಿಕಾರಿಗೆ ನೋಟಿಸ್ ನೀಡಲು ಆದೇಶಿಸಿದೆ.

'ವೋಟ್ ಚೋರಿ' ಆರೋಪಗಳ ಬಗ್ಗೆ SIT ತನಿಖೆ ಕೋರಿದ್ದ PIL ಸುಪ್ರೀಂ ಕೋರ್ಟ್ ನಲ್ಲಿ ವಜಾ!
ಪಾಂಡೆ ಅವರ ಮನವಿಯನ್ನು ತಿರಸ್ಕರಿಸುವ ಮೊದಲು, ಅರ್ಜಿದಾರರ ವಕೀಲರ ಸಲ್ಲಿಕೆಗಳನ್ನು ನ್ಯಾಯಾಲಯ ದಾಖಲೆಯಲ್ಲಿ ಗಮನಿಸಿದೆ.

Cough syrup deaths: ದೇಶಾದ್ಯಂತ ಔಷಧ ಸುರಕ್ಷತೆ ಪರಾಮರ್ಶೆ; ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ PIL ವಜಾ!
ವಕೀಲ ವಿಶಾಲ್ ತಿವಾರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಆಕ್ಷೇಪಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ ವಿನೋದ್ ಚಂದ್ರನ್ ಅವರನ್ನೊಳಗೊಂಡ ನ್ಯಾಯಪೀಠ ವಜಾಗೊಳಿಸಿತು.

Jolly LLB 3: ಚಿತ್ರ ಬಿಡುಗಡೆ ತಡೆ ಕೋರಿ ಸಲ್ಲಿಸಿದ್ದ ಆರ್ಜಿ ತಿರಸ್ಕೃತ; 50,000 ರೂ ದಂಡಕ್ಕೆ ಹೈಕೋರ್ಟ್ ಆದೇಶ
ಇಂತಹ ಅರ್ಜಿಗಳು ನ್ಯಾಯಾಂಗದ ಸಮಯ ಪೋಲು ಮಾಡಲಿದ್ದು, ಅದಕ್ಕಾಗಿಯೇ ಅರ್ಜಿ ಸಲ್ಲಿಕೆ ಮಾಡಿದಂತಿದೆ. ಹೀಗಾಗಿ, ಅರ್ಜಿ ವಜಾಗೊಳಿಸುತ್ತಿದ್ದು, ಅರ್ಜಿದಾರೆಗೆ 50,000 ದಂಡ ವಿಧಿಸಲಾಗಿದೆ.

