ರಾಜ್ಯಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಕ್ಕೆ ಗಣ್ಯರ ದಂಡು: ಸೋನಿಯಾ, ರಾಹುಲ್ ಗಾಂಧಿ ಭಾಗಿ ಸಾಧ್ಯತೆ
ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ನ. 27ರಂದು ಅದ್ಧೂರಿಯಾಗಿ ನಡೆಯಲಿದೆ.