ರಾಜ್ಯಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರ ಕ್ರಮ: 8 ಗ್ಯಾರಂಟಿ ಘೋಷಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಈ ಯೋಜನೆ ರೂಪುಗೊಂಡಿದ್ದು, ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಹಳೆಯ ಬೋಧನಾ ವಿಧಾನಗಳಂತಹ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಒತ್ತು ನೀಡಲಾಗಿದೆ.