ಕ್ರಿಕೆಟ್ಮಹಿಳಾ ಕ್ರಿಕೆಟ್: ಮ್ಯಾಜಿಕ್ ಮಾಡಿದ ಪೂನಮ್ -ಮಿಥಾಲಿ ಜೋಡಿ,ದ. ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು
ಸಂಘಟಿತ ಹೋರಾಟ ನಡೆಸಿದ ಭಾರತ ಮಹಿಳೆಯರ ಕ್ರಿಕೆಟ್ ತಂಡ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಐದು ವಿಕೆಟ್ಗಳ ಜಯ ಸಾಧಿಸಿತು. ಇದರೊಂದಿಗೆ ಇನ್ನೂ ಒಂದು ಪಂದ್ಯ ಬಾಕಿ ಇರುವಾಗಲೇ ಮಿಥಾಲಿ ರಾಜ್ ಬಳಗ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಂಡಿತು.