ರಾಜ್ಯಡಿ.26ಕ್ಕೆ 'ಪೂರ್ಣ ಮಂಡಲೋತ್ಸವ' ಕಾರ್ಯಕ್ರಮ
ಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವದ ಅಂಗವಾಗಿ ಜನಸೇವಾ ವಿಶ್ವಸ್ಥ ಮಂಡಳಿಯು ಇದೇ 26ರಂದು ‘ಪೂರ್ಣ ಮಂಡಲೋತ್ಸವ’ ಕಾರ್ಯಕ್ರಮವನ್ನು ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ.