ಪೆಗಾಸಸ್ ವಿವಾದ

'ಪೆಗಾಸಸ್ ತನಿಖಾ ತಂಡದ ಸದಸ್ಯರಾಗಲು ಹಲವರು ನಿರಾಕರಿಸಿರುವ ವಿಷಯ ಕೇಳಿ ಆತಂಕವಾಗಿದೆ': ಪಿ ಚಿದಂಬರಂ
ಪೆಗಾಸಸ್ ವಿವಾದ ಕುರಿತು ತನಿಖಾ ಸಮಿತಿಯ ಸದಸ್ಯರಾಗಲು ಹಲವರು ನಿರಾಕರಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಆದೇಶದಲ್ಲಿ ನೀಡಿರುವ ಹೇಳಿಕೆ ಕೇಳಿ ಆತಂಕವಾಗಿದ್ದು, ವಿಚಲಿತನಾಗಿದ್ದೇನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ತಿಳಿಸಿದ್ದಾರೆ.

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ: ತನಿಖೆಗೆ ತ್ರಿಸದಸ್ಯ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್
ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ತಜ್ಞರನ್ನೊಳಗೊಂಡ ಸಮಿತಿ ರಚಿಸಿದೆ.

ಪೆಗಾಸಸ್ ವಿವಾದ: ಅರ್ಜಿಗಳಿಗೆ ಪ್ರತಿಕ್ರಿಯಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿಂದ ಮತ್ತಷ್ಟು ಕಾಲಾವಕಾಶ
ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರವಾಗಿ ತನಿಖೆ ನಡೆಸಲು ಒತ್ತಾಯಿಸಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇನ್ನಷ್ಟು ಕಾಲಾವಕಾಶ ನೀಡಿದೆ.

ಪೆಗಾಸಸ್ ವಿವಾದ: ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್; 10 ದಿನಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚನೆ
ಪೆಗಾಸಸ್ ಗೂಢಚರ್ಯೆ ಪ್ರಕರಣವನ್ನು ಸ್ವತಂತ್ರ ತನಿಖೆಗೆ ಒತ್ತಾಯಿಸಿ ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಪೆಗಾಸಸ್ ಪ್ರಕರಣ: ವ್ಯವಸ್ಥೆ ಮೇಲೆ ನಂಬಿಕೆ ಇಡಿ, ಸಾಮಾಜಿಕ ಜಾಲತಾಣಗಳ ಚರ್ಚೆಯಿಂದ ದೂರವಿರಿ; 'ಸುಪ್ರೀಂ' ಸೂಚನೆ
ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಪೆಗಾಸಿಸ್ ವಿವಾದ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿನ ನಡೆಸಲಾಗುತ್ತಿರುವ 'ಪ್ರತ್ಯೇಕ ಚರ್ಚೆ' ಕುರಿತು ಮಂಗಳವಾರ ಸುಪ್ರೀಂ ಕೋರ್ಟ್ ತೀವ್ರವಾಗಿ ಕಿಡಿಕಾರಿದೆ.

ಪೆಗಾಸಸ್ ವಿವಾದ: ಮೌನ ಮುರಿದ ನಿತೀಶ್ ಕುಮಾರ್; ವಿರೋಧ ಪಕ್ಷಗಳನ್ನು ಬೆಂಬಲಿಸಿದ ಬಿಹಾರ ಸಿಎಂ, ತನಿಖೆಗೆ ಆಗ್ರಹ
ರಾಜಕಾರಣಿಗಳು, ಪತ್ರಕರ್ತರು, ನ್ಯಾಯಾಧೀಶರು ಮತ್ತು ಇತರರು ಇಸ್ರೇಲಿ ಸ್ಪೈವೇರ್‌ಗಳ ದಾಳಿಗೆ ಗುರಿಯಾಗಿದ್ದರು ಎನ್ನಲಾದ ಪೆಗಾಸಸ್ ಹಗರಣದ ತನಿಖೆಗೆ ಪ್ರತಿಪಕ್ಷಗಳು ಆಗ್ರಹಿಸಿದೆ.

ಆರೋಪಗಳು ನಿಜವೇ ಆಗಿದ್ದರೆ, ಅದು ಗಂಭೀರವಾದದ್ದು: ಪೆಗಾಸಸ್ ವಿವಾದ ಕುರಿತು ಸುಪ್ರೀಂ ಕೋರ್ಟ್
ಪೆಗಾಸಸ್ ವಿವಾದಕ್ಕೆ ಸಂಬಂಧಿಸಿದ ಆರೋಪಗಳು ನಿಜವೇ ಆಗಿದ್ದರೆ ನಿಜಕ್ಕೂ ಅದು ಗಂಭೀರವಾದದ್ದು ಎಂದು ದೇಶದ ಸರ್ವೋಚ್ಛ ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪೆಗಾಸಸ್ ವಿವಾದ: ದಿಕ್ಕು ಬದಲಿಸಿದ ವಿಪಕ್ಷಗಳು, ಸಂಸತ್ತು ಬದಲು ಸುಪ್ರೀಂಕೋರ್ಟ್'ನಲ್ಲಿ ದನಿ ಎತ್ತಲು ನಿರ್ಧಾರ?
ಪೆಗಾಸಸ್ ಗೂಢಚರ್ಯೆ ಹಗರಣ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಬಿಕ್ಕಟ್ಟು ಶಮನವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಇಷ್ಟೂ ದಿನ ಸಂಸತ್ತಿನಲ್ಲಿ ತೀವ್ರ ಗದ್ದಲ ಸೃಷ್ಟಿಸಿದ್ದ ವಿರೋಧ ಪಕ್ಷಗಳು ಇದೀಗ ಸುಪ್ರೀಂಕೋರ್ಟ್ ನಲ್ಲಿ ದನಿ ಎತ್ತಲು ನಿರ್ಧರಿಸಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಪೆಗಾಸಸ್ ವಿವಾದ: ಆಗಸ್ಟ್ 5 ರಂದು ಸುಪ್ರೀಂಕೋರ್ಟ್ ವಿಚಾರಣೆ
ಪೆಗಾಸಸ್ ಗೂಢಚರ್ಯೆಯನ್ನು ಸುಪ್ರೀಂ ಕೋರ್ಟ್‌ನ ಹಾಲಿ ಅಥವಾ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಹಿರಿಯ ಪತ್ರಕರ್ತರಾದ ಎನ್.ರಾಮ್ ಮತ್ತು ಶಶಿ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 5 ರಂದು ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

