ರಾಜ್ಯವಸತಿಗೃಹಗಳು, ಪೇಯಿಂಗ್ ಗೆಸ್ಟ್ನಿಂದ ಒತ್ತಾಯಪೂರ್ವಕವಾಗಿ ತೆರವುಗೊಳಿಸಬಾರದು: ಟಿ.ಎಂ.ವಿಜಯಭಾಸ್ಕರ್
ಲಾಕ್ ಡೌನ್ ಅವಧಿಯಲ್ಲಿ ಉದ್ಯೋಗಸ್ಥರ ವಸತಿಗೃಹಗಳು, ವಿದ್ಯಾರ್ಥಿ ನಿಲಯಗಳಲ್ಲಿರುವವರನ್ನು ಒತ್ತಾಯಪೂರ್ವಕವಾಗಿ ತೆರವುಗೊಳಿಸಬಾರದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರೂ ಆಗಿರುವ ಟಿ.ಎಂ.ವಿಜಯಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.