ಪ್ರಜ್ಞಾ ಸಿಂಗ್ ಠಾಕೂರ್

ದೇವಾಲಯದ ಹೊರಗೆ ಹಿಂದೂಯೇತರರು ಪ್ರಸಾದ ಮಾರಾಟ ಮಾಡುವುದು ಕಂಡರೆ ಹೊಡೆಯಿರಿ: ಪ್ರಜ್ಞಾ ಠಾಕೂರ್
ದುರ್ಗಾ ವಾಹಿನಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಧ್ವಿ ಪ್ರಜ್ಞಾ, ಹಿಂದೂಯೇತರರು ದೇವಾಲಯಗಳ ಹೊರಗೆ ಪ್ರಸಾದ ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅವರಿಗೆ ಥಳಿಸಿ ಪೊಲೀಸರಿಗೆ ಒಪ್ಪಿಸುವ ಮೂಲಕ ಪಾಠ ಕಲಿಸಬೇಕು ಎಂದು ಹೇಳಿದರು.

ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣ: ಕೊನೆಗೂ ಪ್ರಜ್ಞಾ ಠಾಕೂರ್ ನ್ಯಾಯಾಲಯಕ್ಕೆ ಹಾಜರು!
2008ರ ಮಾಲೆಗಾಂವ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ಹೇಳಿಕೆ ದಾಖಲಿಸಿದ್ದಾರೆ.

ಮಾಲೆಗಾಂವ್ ಸ್ಫೋಟ: ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ವಿಶೇಷ ನ್ಯಾಯಾಲಯ ವಾರಂಟ್ ಜಾರಿ
2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ, ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ವಿರುದ್ಧ ಎನ್‌ಐಎ ವಿಶೇಷ ನ್ಯಾಯಾಲಯ ಸೋಮವಾರ ವಾರೆಂಟ್ ಜಾರಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ನಿಬಂಧನೆಗಳ ಅಡಿಯಲ್ಲಿ ಠಾಕೂರ್ ಮತ್ತು ಇತರ ಆರು ಮಂದಿ ವಿಚಾರಣೆ ಎದುರಿಸುತ್ತಿದ್ದಾರೆ.

ಕಬಡ್ಡಿ ವಿಡಿಯೋ ವೈರಲ್: ವಿಡಿಯೋ ಮಾಡಿದಾತ 'ರಾವಣ' ಎಂದ ಪ್ರಜ್ಞಾ ಠಾಕೂರ್
ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಕಾಳಿ ದೇವಾಲಯದ ಆವರಣದಲ್ಲಿ ಆಡಿದ್ದ ಕಬಡ್ಡಿ ಆಟದ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಮಾಡಿದಾತನನ್ನು ಪ್ರಜ್ಞಾ ಅವರು ರಾವಣ ಸಂಭೋದಿಸಿದ್ದಾರೆ.

ಪ್ರಜ್ಞಾ ಠಾಕೂರ್ 'ಗೋಮೂತ್ರ' ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸಿ: ಕೇಂದ್ರ ಸಚಿವರಿಗೆ ಕಾಂಗ್ರೆಸ್ ಶಾಸಕ ಪತ್ರ
ಕೊರೋನಾ ವಿರುದ್ಧದ 'ಗೋಮೂತ್ರ' ದ ಸಂರಕ್ಷಣೆ ಬಗ್ಗೆ ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ವೈಜ್ಞಾನಿಕವಾಗಿ ಸಾಬೀತುಪಡಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಗೆ ಮನವಿ ಮಾಡಿದ್ದಾರೆ.

ಪ್ರಜ್ಞಾ ಸಿಂಗ್ ಠಾಕೂರ್ ಕ್ಯಾನ್ಸರ್ ಗೆ ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ನಾಪತ್ತೆ ಪೋಸ್ಟರ್‌ಗಳಿಗೆ ಬಿಜೆಪಿ ಪ್ರತಿಕ್ರಿಯೆ
ಭೋಪಾಲ್ ಲೋಕಸಭಾ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ "ಕಾಣೆಯಾಗಿದ್ದಾರೆ" ಎಂದು ಹಲವೆಡೆಗಳಲ್ಲಿ ಪೋಸ್ಟರ್ ಗಳು, ಬ್ಯಾನರ್ ಗಳು ರಾರಾಜಿಸಿದ್ದ ಬೆನ್ನಲ್ಲೇ ಪ್ರಜ್ಞಾ ಸಿಂಗ್ ಅನಾರೋಗ್ಯದ ಕಾರಣ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.

ಶೌಚಾಲಯ, ಚರಂಡಿ ಸ್ವಚ್ಛಗೊಳಿಸಲು ಆಯ್ಕೆಯಾಗಿಲ್ಲ; ಸಾಧ್ವಿ ಪ್ರಜ್ಞಾಗೆ ಹೈಕಮಾಂಡ್ ಸಮನ್ಸ್
ಶೌಚಾಲಯ ಮತ್ತು ಚರಂಡಿಯನ್ನು ಸ್ವಚ್ಛಗೊಳಿಸಲು ನಾನು ಸಂಸದೆಯಾಗಿ ಆಯ್ಕೆಯಾಗಿಲ್ಲ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಗೆ ಬಿಜೆಪಿ ಹೈಕಮಾಂಡ್ ಸಮನ್ಸ್ ನೀಡಿದೆ.

ಮುಂಬೈ ಎಟಿಎಸ್ ಅಧಿಕಾರಿಗಳು ನನಗೆ ಚಿತ್ರಹಿಂಸೆ ನೀಡಿದ್ದರು: ಪ್ರಜ್ಞಾ ಸಿಂಗ್ ಠಾಕೂರ್
ರಾಷ್ಟ್ರೀಯ ಸ್ವಯಂ ಸೇವಕ ಸಂಘದೊಂದಿಗೆ ನಾನು ಮತ್ತು ನನ್ನ ಕುಟುಂಬಸ್ಥರು ಉತ್ತಮವಾದ ನಂಟು ಹೊಂದಿದ್ದರಿಂದಾಗಿ ಸುಳ್ಳು ಪ್ರಕರಣಗಳಲ್ಲಿ ನನ್ನನ್ನು ಗುರಿ ಮಾಡಲಾಗಿತ್ತು ಎಂದು ಸಾಧ್ವಿ ಪ್ರಜ್ಞಾ ಸಿಂಗ್...

