ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ

ನಮ್ಮ ಕುಟುಂಬದವರ ಮೊಬೈಲ್ ಫೋನ್ ಕದ್ದಾಲಿಕೆ; ಪ್ರಜ್ವಲ್ ರೇವಣ್ಣ SIT ಮುಂದೆ ಶರಣಾಗಲಿ: ಎಚ್.ಡಿ ಕುಮಾರಸ್ವಾಮಿ
ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಸೆಕ್ಸ್ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ನನ್ನ ಕುಟುಂಬದವರ ಎಲ್ಲ ಸದಸ್ಯರ ಮೊಬೈಲ್ ಫೋನ್ ಗಳನ್ನು ಕದ್ದಾಲಿಸಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರೆಂದು ಹೇಳಿಕೊಂಡ ಮೂವರಿಂದ ಸುಳ್ಳು ದೂರು ದಾಖಲಿಸಲು ಸಂತ್ರಸ್ತೆಗೆ ಒತ್ತಾಯ- NCW
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಜನರ ಗುಂಪೊಂದು ಕಿರುಕುಳ ನೀಡುವುದಾಗಿ ಬೆದರಿಕೆ ಹಾಕಿದ ನಂತರ ಸುಳ್ಳು ದೂರು ದಾಖಲಿಸುವಂತೆ ತನ್ನನ್ನು ಒತ್ತಾಯಿಸಿದ್ದಾಗಿ ಸಂತ್ರಸ್ತೆಯೊಬ್ಬರು ಹೇಳಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ.

