ದೇಶಅದಾನಿ ಗ್ರೂಪ್ ವಿರುದ್ಧ ಜೆಪಿಸಿ ತನಿಖೆಗೆ ಆಗ್ರಹ: ಕೇಂದ್ರ ಸರ್ಕಾರದ ವಿರುದ್ಧ ಪ್ರತ್ಯೇಕ ಪ್ರತಿಭಟನೆ, ವಿರೋಧ ಪಕ್ಷಗಳ ನಡುವಿನ ಬಿರುಕು ಬಹಿರಂಗ!
ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸುವಂತ ಒತ್ತಾಯಿಸಿ ಪ್ರತಿಪಕ್ಷಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಂಗಳವಾರ ಪ್ರತ್ಯೇಕವಾಗಿ ಪ್ರತಿಭಟನೆಗಳನ್ನು ನಡೆಸಿದ್ದು, ಈ ಪ್ರತಿಭಟನೆಗಳು ವಿರೋಧಪಕ್ಷಗಳಲ್ಲಿ ಮೂಡಿರುವ ಬಿರುಕನ್ನು ಬಹಿರಂಗಪಡಿಸಿದೆ.