ರಾಜ್ಯಅಗ್ನಿಪಥ್ ಪ್ರತಿಭಟನೆ ರಾಜಕೀಯ ಪ್ರೇರಿತ, ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಆರೋಪ
ಕಾಂಗ್ರೆಸ್ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಇಡೀ ದೇಶದಲ್ಲಿ ಮಾಡುತ್ತಿದೆ. ಅದಕ್ಕೆ ಖಾನಾಪುರ ಶಾಸಕರು ಧರಣಿ ಮಾಡುತ್ತಿರುವುದು ಸಾಕ್ಷಿಯಾಗಿದೆ. ಇಡೀ ಜಗತ್ತಿನಲ್ಲಿ ಅಗ್ನಿಪಥ ಎನ್ನುವುದು ವಿನೂತನ ಯೋಜನೆಯಾಗಿದ್ದು ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.