ಪ್ರಧಾನಿ ಮೋದಿ

ಕೇಂದ್ರ ಬಜೆಟ್ 2024-25: ಇಂದು ದ್ರೌಪದಿ ಮುರ್ಮು ಭಾಷಣ, ನಾಳೆ ಸೀತಾರಾಮನ್ ಬಜೆಟ್ ಮಂಡನೆ, ಇದು ನಾರಿ ಶಕ್ತಿಯ ಹಬ್ಬ- ಪ್ರಧಾನಿ ಮೋದಿ
ಕೇಂದ್ರ ಬಜೆಟ್ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದು, ನಾಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ನಾರಿ ಶಕ್ತಿಯ ಹಬ್ಬವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಬುಧವಾರ ಹೇಳಿದರು.

26/11ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ: ದಾಳಿಯಲ್ಲಿ ಮಡಿದವರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ
ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರ ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಮಡಿದವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಮರಿಸಿದ್ದು, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಈ ಹಬ್ಬ ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ತರಲಿ: ದೇಶದ ಜನತೆಗೆ ದೀಪಾವಳಿ ಶುಭಾಶಯ ಕೋರಿದ ಪ್ರಧಾನಿ ಮೋದಿ
ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂಭ್ರಮ ದೇಶದಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ರಾಷ್ಟ್ರೀಯ ಏಕತಾ ದಿನ: ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಮರಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಮಂಗಳವಾರ ಪುಷ್ಪ ನಮನ ಸಲ್ಲಿಸಿದರು.

ನಮ್ಮ ಮೆಟ್ರೋ ವಿಸ್ತೃತ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ; ಧನ್ಯವಾದ ತಿಳಿಸಿದ ಸಿಎಂ ಸಿದ್ದರಾಮಯ್ಯ, ಕನ್ನಡದಲ್ಲೇ ಭಾಷಣ
ಕೆಆರ್ ಪುರ-ಬೈಯಪ್ಪನಹಳ್ಳಿ ಹಾಗೂ ಕೆಂಗೇರಿ-ಚಲ್ಲಘಟ್ಟದವರೆಗೆ ನಮ್ಮ ಮೆಟ್ರೋ ವಿಸ್ತ್ರತ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಿದರು.

ಪ್ರಧಾನಿ ಮೋದಿಗೆ ಮಣಿಪುರಕ್ಕಿಂತ ಇಸ್ರೇಲ್ ಬಗ್ಗೆಯೇ ಹೆಚ್ಚು ಕಾಳಜಿ: ರಾಹುಲ್ ಗಾಂಧಿ
ಜನಾಂಗೀಯ ಸಂಘರ್ಷದಿಂದ ನಲುಗಿರುವ ಮಣಿಪುರಕ್ಕಿಂತ ಇಸ್ರೇಲ್ ರಾಷ್ಟ್ರದ ಬಗ್ಗೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹೆಚ್ಚು ಕಾಳಜಿ ಇದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಕಿಡಿಕಾರಿದ್ದಾರೆ.

ವಿದೇಶ ಪ್ರವಾಸದಲ್ಲಿ ಪ್ರಧಾನಿ: ದಕ್ಷಿಣ ಆಫ್ರಿಕಾದಿಂದಲೇ ವರ್ಚುವಲ್ ಆಗಿ ಚಂದ್ರಯಾನ-3 ವೀಕ್ಷಣೆ
ಭಾರತದ ಚಂದ್ರಯಾನ-3 ಬಹುತೇಕ ಯಶಸ್ವಿಯಾಗಿodog, ಇದೀಗ ಚಂದ್ರನ ಮೇಲ್ಮೈನಲ್ಲಿ ವಿಕ್ರಮ್ ಲ್ಯಾಂಡರ್ ಉಪಗ್ರಹ ಲ್ಯಾಂಡ್ ಮಾಡಲು ಇಸ್ರೋ ಸಕಲ ಸಿದ್ಧತೆಗಳ ನಡೆಸಿದೆ. ಈ ವಿಶೇಷ ಕ್ಷಣಕ್ಕಾಗಿ ಭಾರತ ಮಾತ್ರವಲ್ಲ ವಿಶ್ವವೇ ಕಾಯುತ್ತಿದೆ.

ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ: ದೇಶ ಈ ಮೊದಲೇ ಅವರಿಗೆ ಪಾಠ ಕಲಿಸಿದೆ; ವಿಪಕ್ಷಗಳ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ
ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಕಿಡಿಕಾರಿದ್ದಾರೆ.

ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಗೌರವ ಸಲ್ಲಿಕೆ
ಕಾರ್ಗಿಲ್ ಯುದ್ಧದಲ್ಲಿ ವಿಜಯ ಸಾಧಿಸಿದ 24ನೇ ವಾರ್ಷಿಕೋತ್ಸವದ ಅಂಗವಾಗಿ ಬುಧವಾರ ಹುತಾತ್ಮ ವೀರ ಯೋಧರಿಗೆ ದೇಶದಾದ್ಯಂತ ಗೌರವ ಸಲ್ಲಿಸಲಾಗುತ್ತಿದೆ.

