ವಿದೇಶಪಾಕಿಸ್ತಾನ: ರಾಜಕೀಯ ಪಕ್ಷದ ಸಮಾವೇಶದಲ್ಲಿ ಆತ್ಮಹತ್ಯಾ ಬಾಂಬ್ ಸ್ಫೋಟ; ಮೃತರ ಸಂಖ್ಯೆ 44ಕ್ಕೆ ಏರಿಕೆ
ಪಾಕಿಸ್ತಾನದ ಖೈಬರ್ ಪ್ರಾಂತ್ಯದ ಬಜೌರ್ ಬುಡಕಟ್ಟು ಜಿಲ್ಲೆಯ ರಾಜಧಾನಿ ಖಾರ್ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ ಕಾರ್ಯಕರ್ತರ ಸಮಾವೇಶದಲ್ಲಿ ನಿನ್ನೆ ಭಾನುವಾರ ಸಂಜೆ 4 ಗಂಟೆಯ ಹೊತ್ತಿಗೆ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 44ಕ್ಕೆ ಏರಿಕೆಯಾಗಿದೆ. ಸುಮಾರು 100 ಮಂದಿ ಗಾಯಗೊಂಡಿದ್ದಾರೆ.