ವಿಶೇಷಏನಿದು ಎಪಿಎಂಸಿ ಕಾಯಿದೆ ತಿದ್ದುಪಡಿ ಸುಗ್ರೀವಾಜ್ಞೆ? ಇದಕ್ಕೆ ಅಷ್ಟೊಂದು ವಿರೋಧ ಯಾಕೆ?
ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಎಪಿಎಂಸಿ ಕಾಯಿದೆ ಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಸುಗ್ರೀವಾಜ್ಞೆಗೆ ತರಾತುರಿಯಲ್ಲಿ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದರಿಂದ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.