ರಾಜ್ಯದಸರಾ ವೇಳೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧ: ರೋಹಿಣಿ ಸಿಂಧೂರಿ
ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ನಾಡಹಬ್ಬ ದಸರಾ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಆಗಮಿಸದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.