ರಾಜ್ಯಪ್ರವಾಸಿಗರ ಮೇಲಿನ ನಿರ್ಬಂಧ ಹಿಂಪಡೆದ ಮೈಸೂರು ಜಿಲ್ಲಾಧಿಕಾರಿ
ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತೆ ವಹಿಸುವ ಸಂಬಂಧ ಎಚ್ ಡಿ ಕೋಟೆ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್, ಹೋಮ್ ಸ್ಟೇ, ರೆಸಾರ್ಟ್ ಲಾಡ್ಜ್, ವಸತಿ ಗೃಹಗಳಿಗೆ ಪ್ರವಾಸ ಮಾಡುವುದು ಹಾಗೂ ಪ್ರವಾಸಿಗರು ಆಗಮಿಸದಂತೆ ನಿರ್ಬಂಧಿಸಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಅವರು ಹೇಳಿದ್ದಾರೆ.