ರಾಜ್ಯಆಸ್ಪತ್ರೆಯಲ್ಲಿ ಪ್ರೀ-ವೆಡ್ಡಿಂಗ್ ಫೋಟೋ ಶೂಟ್: ಸೇವೆಯಿಂದ ವೈದ್ಯ ವಜಾ
ಪ್ರೀ ವೆಡ್ಡಿಂಗ್ ಫೋಟೋ ಶೂಟ್ಗೆ ತಾಲೂಕಿನ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದ ಶಸ್ತ್ರಚಿಕಿತ್ಸಾ ಘಟಕ ಬಳಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಹೊರಗುತ್ತಿಗೆ ವೈದ್ಯ ಡಾ. ಅಬಿಷೇಕ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. ಅವರು ಆದೇಶಿಸಿದ್ದಾರೆ.