ರಾಜ್ಯಮಂಗಳೂರು ವಿವಿಯ ನೂತನ ಕುಲಪತಿಯಾಗಿ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತಾಯ ನೇಮಕ
ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ವಾಣಿಜ್ಯ ಪ್ರೊಫೆಸರ್ ಹಾಗೂ ವಿವಿಯ ಮಾಜಿ ರಿಜಿಸ್ಟ್ರಾರ್ ಆಗಿದ್ದ ಡಾ.ಪಿ.ಸುಬ್ರಹ್ಮಣ್ಯ ಯಡಪಡಿತಾಯ ಅವರನ್ನು ನೇಮಿಸಿ ರಾಜ್ಯಪಾಲರಾದ ವಜೂಭಾಯಿ ವಾಲಾ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.