ಕ್ರಿಕೆಟ್ಮುಂದಿನ ಪಂದ್ಯ ಗೆಲ್ಬೇಕು ಅಂದ್ರೆ RCB ಪ್ಲೇಯಿಂಗ್ XI ನಿಂದ ಇವರನ್ನು ಕೈಬಿಡಿ; ಮಾಜಿ ಆಟಗಾರನ ಸಲಹೆ
ಐಪಿಎಲ್ 2024ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಆಡಿರುವ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋಲು ಕಂಡಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತ ನಂತರ ಆರ್ಸಿಬಿ ಪ್ಲೇಯಿಂಗ್ XI ನಲ್ಲಿ ಭಾರಿ ಬದಲಾವಣೆ ಮಾಡಿಕೊಳ್ಳಬೇಕೆಂದು ಭಾರತೀಯ ಕ್ರಿಕೆಟ್ ತಂಡದ ಮಾಜಿ ಬ್ಯಾಟರ್ ಕೃಷ್ಣಮಾಚಾರಿ ಶ್ರೀಕಾಂತ್ ಸೂಚಿಸಿದ್ದಾರೆ.