ರಾಜ್ಯಬಾಗಲಕೋಟೆ: ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯ, ಶೋಕ ಸಾಗರದಲ್ಲಿ ಭಕ್ತರು!
ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ನಗರದ ಬಂಡಿಗಣಿ ಮಠದ ದಾಸೋಹ ಚಕ್ರವರ್ತಿ ದಾನೇಶ್ವರ ಸ್ವಾಮೀಜಿ ಲಿಂಗೈಕ್ಯರಾಗಿದ್ದಾರೆ. 75 ವರ್ಷದ ದಾನೇಶ್ವರ ಸ್ವಾಮೀಜಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಅವರನ್ನು ನಾಲ್ಕು ದಿನಗಳ ಹಿಂದೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.