ರಾಜಕೀಯಷರತ್ತುಬದ್ಧ ಸಾಲ ಮನ್ನಾ, ಮಹಿಳೆಯರಿಗೆ 1 ಲಕ್ಷ, ರೈತರಿಗೆ 5 ಲಕ್ಷ ರೂ. ಬಡ್ಡಿರಹಿತ ಸಾಲ: ಸಿದ್ದರಾಮಯ್ಯ
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಷರತ್ತುಬದ್ಧ ಸಾಲಮನ್ನಾ ಮಾಡಲಾಗುವುದು ಮತ್ತು ಮಹಿಳೆಯರಿಗೆ ನೀಡಲಾಗುತ್ತಿರುವ 50 ಸಾವಿರ ರೂಪಾಯಿ ಬಡ್ಡಿರಹಿತ ಸಾಲವನ್ನು ಒಂದು ಲಕ್ಷ ರೂಪಾಯಿಗೆ ಏರಿಸುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರ ಭರವಸೆ ನೀಡಿದ್ದಾರೆ.